ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬೇಡಿಕೆ ಈಡೇರಿಕೆಗೆ ದಸಂಸ ಒತ್ತಾಯ

Vishwanath S
Updated On : 5 Sept 2013, 11:36 am

ಕ.ಪ್ರ.ವಾರ್ತೆ  ಶಿವಮೊಗ್ಗ  ಸೆ.4
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದಸಂಸ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕ ಎಂ. ಗುರುಮೂರ್ತಿ ನ್ಯಾಯಮೂರ್ತಿ ಸದಾಶಿವ ಆಯೋಗದ ಒಳ ಮೀಸಲಾತಿ ವರ್ಗೀಕರಣ ಕುರಿತಾದ ಶಿಫಾರಸುಗಳನ್ನು ಜಾರಿಗೆ ತರಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸ್ಥಾಪಿಸಬೇಕು. ದೇಶದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್‌ರಾಮ್ ಭವನದ ಕಾಮಗಾರಿಯನ್ನು ತಕ್ಷಣವೇ ಆರಂಭಿಸಬೇಕು ಎಂದು ಆಗ್ರಹಿಸಿದರು.
ಹೆಚ್ಚಿನ ಹಾಸ್ಟೆಲ್: ರಾಜ್ಯದ ಎಲ್ಲಾ ದಲಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕಡ್ಡಾಯವಾಗಿ ಹಾಸ್ಟೆಲ್ ಸೌಲಭ್ಯ ಒದಗಿಸುವ ಸಲುವಾಗಿ ಇನ್ನೂ ಹೆಚ್ಚಿನ ಹಾಸ್ಟೆಲ್‌ಗಳನ್ನು ಆರಂಭಿಸುವುದು, ಹಾಲಿ ಅಸ್ತಿತ್ವದಲ್ಲಿರುವ ಅವ್ಯವಸ್ಥೆಯ ಹಾಸ್ಟೆಲ್‌ಗಳನ್ನು ಮೇಲ್ದರ್ಜೆಗೇರಿಸುವುದು. ಶಿವಮೊಗ್ಗ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ವಾಸಿಸುತ್ತಿರುವ ದಲಿತರಿಗೆ ಪ್ರತ್ಯೇಕ ಸ್ಮಶಾನಭೂಮಿ ಮಂಜೂರು ಮಾಡಬೇಕು ಎಂದು ಪ್ರತಿಭಟನಕಾರರ ಪರವಾಗಿ ಆಗ್ರಹಿಸಿದರು.
ಜಿಲ್ಲಾಡಳಿತ ಮಹಾತ್ಮಾಗಾಂಧಿ ಉದ್ಯಾನವನಕ್ಕೆ ಲಕ್ಷಾಂತರ ರೂ ಖರ್ಚು ಮಾಡಿ, ಮೂರು ಗೇಟು ನಿರ್ಮಿಸಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡದೆ ಆ ಮೂರೂ ಗೇಟುಗಳಿಗೆ ಬೀಗ ಜಡದಿದ್ದಾರೆ.
ಅಲ್ಲದೇ ಅಂಬೇಡ್ಕರ್ ಭವನದ ಜಾಗವನ್ನು ಒತ್ತುವರಿ ಮಾಡಿ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಸಾರ್ವಜನಿಕರಿಗೆ ಓಡಾಡಲು ಅವಕಾಶ ಮಾಡಿಕೊಟ್ಟು ಟಿಕೇಟ್ ಕೌಂಟರ್ ತೆರೆದಿದ್ದಾರೆ ಎಂದು ಆರೋಪಿಸಿದರು.
ಬೀಗ ಹಾಕಿಸಿ: ಈ ನಿಟ್ಟಿನಲ್ಲಿ ಮಹಾತ್ಮಾಗಾಂಧಿ ಉದ್ಯಾನವನದ ಮೂರು ಗೇಟುಗಳನ್ನು ಸಾರ್ವಜನಿಕರಿಗೆ ಓಡಾಡಲು ಮುಕ್ತ ಅವಕಾಶ ಕಲ್ಪಿಸಬೇಕು ಮತ್ತು ಅಂಬೇಡ್ಕರ್ ಭವನದ ಮುಂಭಾಗದಲ್ಲಿರುವ ಟಿಕೇಟ್ ಕೌಂಟರ್‌ನ್ನು ಮುಚ್ಚಿಸಬೇಕು.
  ಗೇಟ್‌ಗೆ ಬೀಗ ಹಾಕಬೇಕು ಹಾಗೂ ಅಂಬೇಡ್ಕರ್ ಭವನದ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಭಟನಕಾರರು ಮನವಿ ಮಾಡಿದರು.
ಕೂಡಲೇ ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ದಲಿತ ಸಮುದಾಯ ಹೋರಾಟಕ್ಕೆ ಸಿದ್ಧವಾಗಬೇಕಾಗುತ್ತದೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು.
ಜಿಲ್ಲಾ ಸಂಚಾಲಕ ಟಿ.ಎಚ್. ಹಾಲೇಶಪ್ಪ, ತಾಲೂಕು ಸಂಚಾಲಕ ಚಿಕ್ಕಮರಡಿ ರಮೇಶ್, ಮುಖಂಡ ಎನ್. ಮಂಜುನಾಥ್ ಮೊದಲಾದವರು ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement