ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವಿದ್ಯಾರ್ಜನೆಗಾಗಿ ಮಾಡುವ ಸಹಾಯ ಅಮೂಲ್ಯವಾದುದು

Vishwanath S
Updated On : 6 Sept 2013, 11:39 am

ಶಂಕರಘಟ್ಟ: ಸಮಾಜದಲ್ಲಿರುವ ಸಂಘ ಸಂಸ್ಥೆಗಳು, ದಾನಿಗಳು ಮಾಡುವ ಯಾವುದೇ ಸಮಾಜ ಸೇವಾ ಕಾರ್ಯಗಳಿಗಿಂತ ವಿದ್ಯಾರ್ಜನೆಗಾಗಿ ಮಾಡುವ ಸಹಾಯ ಬಹಳ ಅಮೂಲ್ಯವಾದುದು ಎಂದು ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.
 ಶಂಕರಘಟ್ಟದ ದೀನಬಂಧು ಸೇವಾ ಟ್ರಸ್ಟ್ ಮತ್ತು ದೀನಬಂಧು ಸಮಾಜ ಸೇವಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜ ಸಂಪೂರ್ಣ ಸಾಕ್ಷರತೆಯನ್ನು ಹೊಂದಿದಾಗ ಆ ಸಮಾಜ ಆರೋಗ್ಯಪೂರ್ಣವಾಗಿ ಬೆಳೆಯುತ್ತದೆ. ಇಲ್ಲದಿದ್ದಲ್ಲಿ ಅದು ರೋಗಪೀಡಿತವಾಗುವ ಸಂಭವವಿರುತ್ತದೆ ಎಂದರು. ಸಮಾಜವನ್ನು ಸಂಪೂರ್ಣ ಸಾಕ್ಷರತೆಯೆಡೆಗೆ ಕೊಂಡೊಯ್ಯಬೇಕಾದಲ್ಲಿ ವಿದ್ಯಾರ್ಥಿಗಳಿಗೆ ಸಹಾಯ ಬೇಕಾಗುತ್ತದೆ. ಅದರಲ್ಲೂ ಮುಖ್ಯವಾಗಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯೋಗವಾಗುತ್ತದೆಂದರು.
ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಿವೃತ್ತ ಶಿಕ್ಷಕ ಮಹೇಶ್ವರಪ್ಪ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು.
 ಸ್ಥಳೀಯ ಗ್ರಾಪಂ ಅಧ್ಯಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಕುವೆಂಪು ವಿ.ವಿ ಪ್ರಾಧ್ಯಾಪಕ ಡಾ.ಬಸವರಾಜ್ ನೆಲ್ಲಿಸರ, ಮಾಜಿ ಪ್ರಧಾನ ಪಟೇಲ್ ಸಿದ್ಧಲಿಂಗಪ್ಪ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ಅಧ್ಯಾಪಕೇತರ ನೌಕರರ ಸಂಘದ ಅಧ್ಯಕ್ಷ ಪಿ. ಮಹೇಶ್ ಉಪಸ್ಥಿತರಿದ್ದರು. ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ರಮೇಶ್ ಸ್ವಾಗತಿಸಿದರೆ, ಕಾರ್ಯದರ್ಶಿ ಎಂ. ಸಿದ್ಧರಾಮ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement