ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

16, ನವೋದಯ ಸಹಕಾರ ಶಾಖೆ ಉದ್ಘಾಟನೆ

Lingaraj Badiger
Updated On : 7 Sept 2013, 10:45 am

ಶಿವಮೊಗ್ಗ: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ತನ್ನ 6ನೇ ಶಾಖೆಯ ಉದ್ಘಾಟನಾ ಸಮಾರಂಭವನ್ನು ಕೋಣಂದೂರಿನಲ್ಲಿ ಸೆ.16ರಂದು ಬೆಳಿಗ್ಗೆ10.30ಕ್ಕೆ ಇಲ್ಲಿನ ವಿನಾಯಕ ಮಾಂಗಲ್ಯ ಮಂದಿರದಲ್ಲಿ  ಹಮ್ಮಿಕೊಂಡಿದೆ.
ಶ್ರೀ ಕ್ಷೇತ್ರ ಹೊಂಬುಜ ಮಠದ ಶ್ರೀ ಮಧಭಿನವ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಚಾರ್ಯವರ್ಯ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಶಾಖೆ ಉದ್ಘಾಟಿಸುವರು. ಭದ್ರತಾ ಕೊಠಡಿಯನ್ನು ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಸೇಫ್ ಲಾಕರ್‌ನ್ನು ಕೋಣಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಾಣಿ ಸುರೇಶ್ ಹಾಗೂ ಗಣಕೀರಣದ ಉದ್ಘಾಟನೆಯನ್ನು ತೀರ್ಥಹಳ್ಳಿಯ ಮಾಜಿ ಶಾಸಕ ಆರಗ ಜ್ಞಾನೇಂದ್ರ ನೆರವೇರಿಸುವರು. ಅಧ್ಯಕ್ಷತೆಯನ್ನು ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ವಹಿಸುವರು. ಗಜೇಂದ್ರ ಉಪಸ್ಥಿತರಿರುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement