ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಇಂದು ಉದ್ಘಾಟನೆ

Lingaraj Badiger
Updated On : 7 Sept 2013, 10:46 am

ಶಿವಮೊಗ್ಗ: ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಉದ್ಘಾಟನಾ ಸಮಾರಂಭವು ಸೆ.7ರಂದು ಬೆಳಿಗ್ಗೆ 10ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ.
ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಉದ್ಘಾಟಿಸುವರು. ಪಾಸಿಟಿವ್ ಮೈಂಡ್ ಕ್ಲಿನಿಕ್‌ನ ವೈದ್ಯ ಡಾ. ಅರವಿಂದ ಎಸ್.ಟಿ., ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಇಂದುಮತಿ ಮುಖ್ಯ ಅತಿಥಿಯಾಗಿ ಆಗಮಿಸಲಿರುವರು. ಕಾಲೇಜಿನ ಪ್ರಾಚಾರ್ಯೆ ಎಸ್.ಆರ್. ಮಾಡ್ಯಾಳ್ ಅಧ್ಯಕ್ಷತೆ ವಹಿಸುವರು. ಹಿರಿಯ ಉಪನ್ಯಾಸಕ ಕೃಷ್ಣಮೂರ್ತಿ , ಸರೋಜ ಪಿ.ಹೆಗಡೆ,  ಮುಂತಾದ ಗಣ್ಯರು ಉಪಸ್ಥಿತರಿರುವರು.
ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿ
ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನ 14 ಮತ್ತು 17 ವರ್ಷ ವಯೋವುತಿಯೊಳಗಿನ ಶಾಲಾ ಬಾಲಕರ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಸೆ.13ರಂದು ಬೆ.9ಕ್ಕೆ  ನಡೆಸಲಾಗುವುದು. ಅರ್ಹ ಕುಸ್ತಿಪಟುಗಳು ತಮ್ಮ ಹೆಸರನ್ನು ಅಂದು ಬೆಳಿಗ್ಗೆ 9 ಗಂಟೆಯೊಳಗಾಗಿ ಕ್ರೀಡಾಂಗಣದ ಸಂಘಟಕರಲ್ಲಿ ನೋಂದಾಯಿಸಿಕೊಳ್ಳಬೇಕು. ವಿವರಗಳಿಗೆ ಶಿವಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ, ಮೊ.9741641435ನ್ನು ಸಂಪರ್ಕಿಸಲು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement