ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕಾಗೋಡು ಪ್ರಶಸ್ತಿಗೆ ನಯೀಂ ಆಯ್ಕೆ

Mainashree
Updated On : 8 Sept 2013, 12:40 pm

ಶಿವಮೊಗ್ಗ: ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರ ಹೆಸರಿನಲ್ಲಿ ಸಮಾಜವಾದಿ ಚಿಂತನೆಗಾಗಿ ಪ್ರಸಕ್ತ ವರ್ಷದಿಂದ ಆರಂಭಿಸಲಾಗಿರುವ ಪ್ರಶಸ್ತಿಗೆ ಲೇಖಕ ಹಾಗೂ ಅನುವಾದಕ ಹಸನ್ ನಯೀಂ ಅವರನ್ನು ಆಯ್ಕೆ ಮಾಡಲಾಗಿದೆ. ಸೆ.10ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಹಸನ್ ನಯೀಂ ಸುರಕೋಡ ಅವರು ಅನುವಾದಕರಾಗಿದ್ದು, ಪಂಜಾಬಿ ಲೇಖಕಿ ಅಮೃತ ಪ್ರೀತಂ ಅವರ ಆತ್ಮಕತೆ 'ರಶೀದಿ ಟಿಕೇಟು' ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಜಾತಿ ಪದ್ಧತಿ, ಲೋಹಿಯಾ ಬಗ್ಗೆ ಕೃತಿಗಳನ್ನು ರಚಿಸಿದ್ದಾರೆ. ಅಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರು ಸುರಕೋಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement