ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ನಾಳೆ ಮಾಂಸ ಮಾರಾಟ ನಿಷೇಧ

Vishwanath S
Updated On : 8 Sept 2013, 12:12 pm

ಶಿವಮೊಗ್ಗ: ಸೆ.9ರಂದು ನಗರದೆಲ್ಲೆಡೆ ಸಾರ್ವಜನಿಕರು ಗಣೇಶ ಚತುರ್ಥಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಾನುಸಾರ ಅಂದು ಶಿವಮೊಗ್ಗ ನಗರಸಭಾ ವ್ಯಾಪ್ತಿಯ ಮಾಂಸ ಮಾರಾಟಗಾರರು ತಮ್ಮ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ನಗರಸಭಾ ವ್ಯಾಪ್ತಿಗೊಳಪಡುವ ಸಮಸ್ತ ಮಾಂಸ ಮಾರಾಟಗಾರರು ತಮ್ಮ ವ್ಯವಹಾರವನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸುವಂತೆ ಹಾಗೂ ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಣ್ಯರಿಂದ ಹಬ್ಬದಶುಭಾಶಯಗಳು
ಶಿವಮೊಗ್ಗ:  ಗೌರಿ-ಗಣೇಶ ಹಬ್ಬದ ಅಂಗವಾಗಿ ಪ್ರಾಥಮಿಕ, ಪ್ರೌಢ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ ಹಾಗೂ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್. ಷಡಾಕ್ಷರಿ ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ.
ವಾರ್ಷಿಕ ಮಹಾಸಭೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆ ಸೆ. 11ರಂದು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಜಿಡಿಸಿ ಸಹಕಾರ ತರಬೇತಿ ಕೇಂದ್ರ) ವಿನೋಬ ನಗರ, 2ನೇ ಹಂತ, ಶಿವಮೊಗ್ಗ ಇಲ್ಲಿ ಯೂನಿಯನ್‌ನ ಅಧ್ಯಕ್ಷ ಬಿ.ಡಿ. ಭೂಕಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸದಸ್ಯರು ಸಕಾಲದಲ್ಲಿ ಆಗಮಿಸುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.
ಸಾಗರ: ಸಂಕುಚಿತ ಮನೋಭಾವವನ್ನು ತೊರೆದಾಗ ಮಾತ್ರ ವಿದ್ಯಾರ್ಥಿಜೀವನ ಸಾರ್ಥಕವಾಗುತ್ತದೆ ಎಂದು ಯುಗಧರ್ಮ ಜನಪದ ಟ್ರಸ್ಟ್ ಅಧ್ಯಕ್ಷ ಡಿ.ಎಸ್. ಅರುಣ್ ಅಭಿಪ್ರಾಯಪಟ್ಟರು. ಪಟ್ಟಣದ ಶೃಂಗೇರಿ ಶಂಕರಮಠದಲ್ಲಿ ಧಾರವಾಡದ ವಿದ್ಯಾಪೋಷಕ್ ಸಂಸ್ಥೆ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಮಾಡಿ ಅವರು ಮಾತನಾಡಿದರು.ಆಧುನಿಕತೆಗೆ ತೆರೆದುಕೊಂಡಿರುವ ಇಂದಿನ ವಿದ್ಯಾರ್ಥಿಗಳಲ್ಲಿ ಅಂತರ್ಗತವಾಗಿರುವ ಕ್ರಿಯಾಶೀಲತೆ ಕಡಿಮೆಯಾಗುತ್ತಿದೆ. ಮೊಬೈಲ್, ಇಂಟರ್‌ನೆಟ್, ಕಂಪ್ಯೂಟರ್ ಬಳಕೆಯಿಂದಾಗಿ ಪತ್ರಗಳನ್ನು ಬರೆಯುವ ಹವ್ಯಾಸ ಕಡಿಮೆಯಾಗುತ್ತಿದೆ. ನಿಮ್ಮಲ್ಲಿರುವ ವಿದ್ಯಾಸಕ್ತಿಯನ್ನು ಗುರುತಿಸಿ ವಿದ್ಯಾಪೋಷಕ್ ಸಂಸ್ಥೆ ನಿಮ್ಮ ನೆರವಿಗೆ ನಿಂತಿದೆ. ನೀವು ಉನ್ನತ ಸ್ಥಾನಕ್ಕೆ ಹೋದಾಗ ಸಂಸ್ಥೆಯ ಜೊತೆ ನಿಕಟ ಸಂಪರ್ಕ ಇರಿಸಿಕೊಂಡು, ನಿಮ್ಮಂತೆ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಅಶೋಕ ಡಿ. ರೇವಣಕರ್, ಆರ್ಥಿಕ ಸಂಕಷ್ಟ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಡಕಾಗಬಾರದು ಎಂದರು. ಸಂಸ್ಥೆಯ ಜಿಲ್ಲಾ ಸಂಚಾಲಕ ಭಟ್ ಮಾತನಾಡಿ, ಜಿಲ್ಲೆಯಲ್ಲಿ ಸಂಸ್ಥೆಯು ಈ ವರೆಗೆ 336 ವಿದ್ಯಾರ್ಥಿಗಳಿಗೆ ಸುಮಾರು 37 ಲಕ್ಷ ಧನ ಸಹಾಯ ಕಲ್ಪಿಸುವ ಜೊತೆಗೆ 895 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಿದೆ. ಎರಡು ಸಾವಿರಕ್ಕೂ ಹೆಚ್ಚು ಪಠ್ಯಪುಸ್ತಕವನ್ನು ವಿತರಿಸಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement