ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ನ್ಯಾಯಬೆಲೆ ಅಂಗಡಿ ಮಂಜೂರು ಮಾಡಿ

Mainashree
Updated On : 9 Sept 2013, 12:17 pm

ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿ ಕೆಲ ನ್ಯಾಯಬೆಲೆ ಅಂಗಡಿಗಳು ಸರಿಯಾಗಿ ಕಾರ್ಯನಿರ್ವಹಿಸದೆ ರದ್ದಾಗಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಪದವಿ ಪಡೆದು ಯಾವುದೇ ಕೆಲಸವಿಲ್ಲದ ನಿರುದ್ಯೋಗಿಗಳಿಗೆ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಿಕೊಡಬೇಕು ಎಂದು ಭದ್ರಾವತಿ ತಾಲೂಕು ಪದವೀಧರ ನಿರುದ್ಯೋಗಿಗಳ ಸಂಘದ ಸದಸ್ಯರು ಒತ್ತಾಯಿಸಿ ಶನಿವಾರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.  
 ತಾಲೂಕಿನ ಕೆಲ ನ್ಯಾಯಬೆಲೆ ಅಂಗಡಿಗಳು ಅಮಾನತ್ತಿಗೊಳಗಾಗಿ ವರ್ಷಗಳೇ ಕಳೆದಿದೆ. ಅಮಾನತ್ತುಗೊಂಡಿರುವ ನ್ಯಾಯಬೆಲೆ ಅಂಗಡಿ ಮಾಲೀಕರೇ ಹೆಚ್ಚಿನ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾನೂನನ್ನು ಸ್ಪಷ್ಟವಾಗಿ ಉಲ್ಲಂಘನೆ ಮಾಡಿದ್ದಾರೆ.
 ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ಬಂದರೂ ಪ್ರಯೋಜನವಾಗಿಲ್ಲ. ಕೆಲವು ನ್ಯಾಯಬೆಲೆ ಅಂಗಡಿ ಮಾಲೀಕರು ಬೇರೆ ಊರಿನಲ್ಲಿ ವಾಸವಾಗಿದ್ದು, ಅವರ ಹೆಸರಿನಲ್ಲಿ ಅನಾಮಧೇಯ ವ್ಯಕ್ತಿಗಳು ಅಂಗಡಿ ನಡೆಸುತ್ತಿದ್ದಾರೆ.
   ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಂಘ ಆರೋಪಿಸಿದೆ.
 ಈ ಸಂದರ್ಭದಲ್ಲಿ ಸಂಘದ ರವಿ, ದಿನೇಶ್, ಪ್ರವೀಣ್, ಮಹಾಲಿಂಗ, ರಾಮಲಿಂಗ,  ರಾಜೇಶ್ಕುಮಾರ್, ನಂಜುಂಡಕುಮಾರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement