ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪಠ್ಯದೊಂದಿಗೆ ಪಠ್ಯೇತರದಲ್ಲೂ ಪಾಲ್ಗೊಳ್ಳಿ

Mainashree
Updated On : 9 Sept 2013, 12:14 pm

ಕ.ಪ್ರ.ವಾರ್ತೆ  ಶಿವಮೊಗ್ಗ   ಸೆ.8
ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳುವುದರಿಂದ ಹೆಚ್ಚು ಮಾನಸಿಕ ಗುಣಮಟ್ಟ ವೃದ್ಧಿ ಆಗುತ್ತದೆ ಎಂದು ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹೇಳಿದರು.
ಸ.ಪ.ಪೂ. ಕಾಲೇಜು ಶನಿವಾರ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್ನೆಸ್ಸೆಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು, ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧಾತ್ಮಕತೆ ಏರ್ಪಟ್ಟಿದೆ. ಹಾಗಾಗಿ ವಿದ್ಯಾರ್ಥಿಗಳು ಹೆಚ್ಚು ಕ್ರಿಯಾಶೀಲರಾಗಬೇಕು. ಈ ಹಿನ್ನೆಲೆಯಲ್ಲಿ ಮಾನಸಿಕ ಗುಣಮಟ್ಟ ಹೆಚ್ಚಿಸಲು ಸಾಂಸ್ಕೃತಿಕ ಕಾರ್ಯಕ್ರಮ ಅತಿ ಅವಶ್ಯವಾಗಿದೆ ಎಂದರು.
ಹಲವು ಕನಸು: ಪೋಷಕರು ಹಲವಾರು ಕನಸು ಕಟ್ಟಿಕೊಂಡಿರುತ್ತಾರೆ. ಅವರ ಆಸೆ ಈಡೇರಿಸುವುದರ ಮೂಲಕ ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ಸಮಾಜದಲ್ಲಿ  ಹೊರಹೊಮ್ಮಬೇಕು. ನಾಡಿಗೆ, ದೇಶಕ್ಕೆ  ಕೀರ್ತಿ ತರಬೇಕು. ಜಿಲ್ಲೆ ಹಲವಾರು ಗಣ್ಯರನ್ನು ನಾಡಿಗೆ ಕೊಡುಗೆಯಾಗಿ ನೀಡಿದ್ದು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ್ದಾರೆ. ಅದೇ ರೀತಿ ವಿದ್ಯಾರ್ಥಿಗಳು ಕೂಡ ಹೆಸರುಗಳಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ವಿದ್ಯಾರ್ಥಿಗಳು ಸತತ ಪರಿಶ್ರಮದ ಮೂಲಕ ತಾವು ಕನಸು ಕಂಡಿರುವ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳ ವಿಷಯಗಳ ಬಗ್ಗೆಯೂ ಹೆಚ್ಚಿನ ಮಾಹಿತಿ ಕಲೆ ಹಾಕಬೇಕು. ಇಂದಿನ ಯುಗ ಸ್ಪರ್ಧಾತ್ಮಕ ಯುಗವಾಗಿದ್ದು, ವಿದ್ಯಾರ್ಥಿಗಳು ಪ್ರಚಲಿತ ವಿದ್ಯಾಮಾನಗಳ ಕಡೆಗೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಡೆದು ಉನ್ನತ ಸ್ಥಾನಕ್ಕೆ ಏರಬೇಕು ಎಂದರು.
ಅಭಿವೃದ್ಧಿಗೆ ಯೋಜನೆ: ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಹಲವಾರು ಯೋಜನೆ ರೂಪಿಸಿದ್ದು, ಜಾರಿಗೆ ತರಲು ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಪ.ಪೂ.ಕಾಲೇಜಿನ ಆವರಣದಲ್ಲಿ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದರು.
ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಮಾಡ್ಯಾಳ ವಹಿಸಿದ್ದರು.  ಡಾ. ಎಸ್. ಅರವಿಂದ್,  ಉಪನ್ಯಾಸಕ ಕೃಷ್ಣಮೂರ್ತಿ, ಉಮಾಪತಿ, ಗಣೇಶ್‌ರಾವ್,  ರುದ್ರೇಗೌಡ,  ಗೋಪಾಲಕೃಷ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement