ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಹೈ ಸೂಚನೆ

Rashmi Kasaragodu
Updated On : 12 Sept 2013, 11:04 am

ಕ.ಪ್ರ.ವಾರ್ತೆ  ಶಿವಮೊಗ್ಗ   ಸೆ.11
ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನಗರ ಸ್ಥಳೀಯ ಸಂಸ್ಥೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಹಲವು ಹೊಸ ಸೂಚನೆಗಳನ್ನು ನೀಡಿದೆ.
   ಇದರ ಪರಿಣಾಮವಾಗಿ ಬಹಳಷ್ಟು ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ ನಡೆಯಲಿದ್ದು, ನಿಗದಿತ ದಿನದೊಳಗೆ ಅಧಿಸೂಚನೆ ಹೊರಡಿಸದ ಸಂಸ್ಥೆಗಳಲ್ಲಿ ಚುನಾವಣೆ ನಡೆಯದು.
 ನಗರ ಸ್ಥಳೀಯ ಸಂಸ್ಥೆ ಮುಖ್ಯಸ್ಥರ ಮೀಸಲಾತಿ ನಿಗದಿ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಹಲವು ರಿಟ್ ಅರ್ಜಿಗಳು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿತ್ತು.
     ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತದೆಯೋ, ಇಲ್ಲವೋ ಎಂಬ ಬಗ್ಗೆ ಗೊಂದಲ ಮೂಡಿದ್ದವು. ಸ್ಪಷ್ಟೀಕರಣ ಕೋರಿ ನಗರಾಭಿವೃದ್ಧಿ ಇಲಾಖೆಗೆ ದೂರವಾಣಿ ಕರೆಗಳು ಬರುತ್ತಿದ್ದವು.
 ಈ ಹಿನ್ನೆಲೆಯಲ್ಲಿ ರಾಜ್ಯ ಅಡ್ವಕೇಟ್ ಜನರಲ್ ಅವರಿಂದ ಸರ್ಕಾರವು ಸ್ಪಷ್ಟೀಕರಣ ಪಡೆದಿದ್ದು, ಇದನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಯವರಿಗೆ ರವಾನಿಸಿದೆ. ಸ್ಥಳೀಯ ಸಂಸ್ಥೆ ಮಖ್ಯಸ್ಥರ ಚುನಾವಣೆ ಸಂಬಂಧ ಹೊಸ ಸೂಚನೆಗಳನ್ನು ಹೊರಡಿಸಿದೆ.
ಹೀಗಿದೆ ಆದೇಶ: ಚುನಾವಣಾ ವೇಳಾಪಟ್ಟಿ ಹೊರಬಿದ್ದ ನಂತರ ಚುನಾವಣಾ ಪ್ರಕ್ರಿಯೆಯನ್ನು ನಿಲ್ಲಿಸಲಾಗದು ಎಂಬ ಈ ಹಿಂದೆ ಉಚ್ಚ ನ್ಯಾಯಾಲಯವು ನೀಡಿದ್ದ ತೀರ್ಪಿನ ಅನ್ವಯ ಸರ್ಕಾರ ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ಹೊಸ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತಚುನಾವಣೆಗೆ ಅಡ್ಡಿ ಇಲ್ಲ: ಯಾವ ಪಟ್ಟಣ ಪಂಚಾಯ್ತಿಯು ಇದೇ ಸೆ.2ಕ್ಕಿಂತ ಮುಂಚಿತವಾಗಿ ಚುನಾವಣಾ ವೇಳಾಪಟ್ಟಿ ಹೊರಡಿಸಿದ್ದರೆ, ಅಂತಹ ಪಟ್ಟಣ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಂದುವರಿಸಬಹುದು.
 ಪುರಸಭೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಚುನಾವಣೆಗೆ ಸಂಬಂಧಿಸಿದಂತೆ ಯಾವ ಪುರಸಭೆಗಳು ಇದೇ ಸೆ.3ಕ್ಕಿಂತ ಮುಂಚಿತವಾಗಿ ಚುನಾವಣೆ ನಡೆಸಲು ವೇಳಾಪಟ್ಟಿ ಹೊರಡಿಸಿರುತ್ತಾರೆಯೋ ಅಂತಹ ಪುರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯನ್ನು ಮುಂದುವರಿಸಬಹುದು.
   ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಚುನಾವಣೆಗೆ ಸಂಬಂಧಿಸಿದಂತೆ ಯಾವ ನಗರಸಭೆಗಳು ಇದೇ ಸೆ.4ಕ್ಕಿಂತ ಮುಂಚಿತವಾಗಿ ಚುನಾವಣೆ ನಡೆಸಲು ವೇಳಾಪಟ್ಟಿ ಹೊರಡಿಸಿರುತ್ತಾರೆಯೋ ಅಂತಹ ನಗರಸಭೆಗಳಲ್ಲಿ ಚುನಾವಣೆ ಮುಂದುವರಿಸಬಹುದು.
ಡಿಸಿಗೆ ಸೂಚನೆ: ನ್ಯಾಯಾಲಯದ ಆದೇಶದಂತೆ ಇದೂವರೆಗೆ ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಹೊರಡಿಸದಿದ್ದಲ್ಲಿ, ಅಥವಾ ಸೂಚಿಸಿದ ದಿನಾಂಕದಂದು ವೇಳಾಪಟ್ಟಿ ಹೊರಡಿಸದೇ ಇದ್ದಲ್ಲಿ ಯಾವುದೇ ಕಾರಣಕ್ಕೂ ಚುನಾವಣಾ ಪ್ರಕ್ರಿಯೆ ಮುಂದುವರಿಸಬಾರದು.
 ಈ ಬಗ್ಗೆ ಕೈಗೊಂಡ ಕ್ರಮದ ಕುರಿತು ಅನುಸರಣಾ ವರದಿಯನ್ನು ತಕ್ಷಣ ನಗರಾಭಿವೃದ್ಧಿ ಇಲಾಖೆ ಕಚೇರಿಗೆ ತಿಳಿಸುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಲಾಗಿದೆ.
 ನಗರಾಭಿವೃದ್ಧಿ ಇಲಾಖೆಯ ಸೂಚನೆ ತಲುಪಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು.
   ಅನುಸರಣಾ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಚ್.ಆರ್. ರಾಜಪ್ಪ -ಅವರು ಈ ಸಂದರ್ಭದಲ್ಲಿ ಕನ್ನಡಪ್ರಭ-ಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement