ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Rashmi Kasaragodu
Updated On : 12 Sept 2013, 11:06 am

ಭದ್ರಾವತಿ: 2013-14ನೇ ಸಾಲಿನ ಭದ್ರಾವತಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಗಳನ್ನು ಸೆ.14ರಂದು ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಪಂ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭದ್ರಾವತಿ ನಗರಸಭೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದೆ ಎಂದು ಭದ್ರಾವತಿ ತಾಲೂಕು ಉಸ್ತುವಾರಿ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾಗವಹಿಸುವ ಕ್ರೀಡಾಪಟುಗಳು ಸೆ.14ರಂದು ಬೆಳಗ್ಗೆ 9 ಗಂಟೆಯ ಒಳಗಾಗಿ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ ಯಾವುದೇ ವಯಸ್ಸಿನ ನಿರ್ಬಂಧವಿರುವುದಿಲ್ಲ. ಸ್ಪರ್ಧೆ ಕ್ರೀಡೆಗಳು ಮತ್ತು ಮಾಹಿತಿಗಾಗಿ ಮೊ. 9900903323 ಅಥವಾ 9964599936 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement