ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸುವ ಅಗತ್ಯವಿದೆ

Rashmi Kasaragodu
Updated On : 12 Sept 2013, 11:12 am

ಶಿಕಾರಿಪುರ: ಜಗತ್ತಿನಲ್ಲಿ ದೇಶದ ಸ್ಥಾನಮಾನ, ಗೌರವ, ಪ್ರತಿಷ್ಠೆ ಹೆಚ್ಚಿಸಿ ಪ್ರತಿಯೊಬ್ಬರಲ್ಲಿಯೂ ದೇಶಾಭಿಮಾನ ಮೂಡಿಸುವಲ್ಲಿ ಕ್ರೀಡೆಗಳು ಮಹತ್ತರ ಪಾತ್ರವನ್ನು ವಹಿಸುತ್ತಿದ್ದು ವಿದ್ಯಾರ್ಥಿಗಳು ಪಠ್ಯಕ್ಕೆ ಸರಿಸಮಾನವಾಗಿ ಕ್ರೀಡೆಗಳಿಗೂ ಮಹತ್ವವನ್ನು ನೀಡುವ ಮೂಲಕ ದೇಶದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುವತ್ತ ತೀವ್ರ ನಿಗಾವಹಿಸಬೇಕಾಗಿದೆ ಎಂದು ಜಿಲ್ಲಾ ಶಿಕ್ಷಣ ಉಪನಿರ್ದೇಶಕಿ ಇಂದುಮತಿ ತಿಳಿಸಿದರು.
 ಬುಧವಾರ ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾಗಿದ್ದು ಪ್ರತಿ ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಕ್ರೀಡೆಗಳಿಗೆ ಪೂರಕವಾದ ಉತ್ತಮ ಮೈದಾನ ಕ್ರೀಡಾ ಸಾಮಗ್ರಿಗಳನ್ನು ಪೂರೈಸಬೇಕಾದ ಜವಾಬ್ದಾರಿ ಸ್ಥಳೀಯ ಶಿಕ್ಷಣ ಸಂಸ್ಥೆಗಳದ್ದಾಗಿದೆ ಎಂದ ಅವರು ಈ ಮೂಲಕ ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವವನ್ನು ಹೆಚ್ಚಿಸಿ ಹೊಸ ಕ್ರೀಡಾ ಪ್ರತಿಭೆಗಳನ್ನು ಹುಟ್ಟುಹಾಕಬೇಕಾಗಿದೆ ಎಂದರು.
ಅತ್ಯುತ್ತಮ ವೇದಿಕೆ: ಮಾಜಿ ಪುರಸಭಾದ್ಯಕ್ಷ ಹಾಗೂ ಹಾಲಿ ಸದಸ್ಯ ವಸಂತಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತಾಲೂಕು ಮಟ್ಟದ ಕ್ರೀಡೆಗಳು ಉತ್ತಮ ಕ್ರೀಡಾಪಟುಗಳಿಗೆ ಅತ್ಯುತ್ತಮ ವೇದಿಕೆಯಾಗಿದ್ದು ಈ ದಿಸೆಯಲ್ಲಿ ವಿದ್ಯಾರ್ಥಿಗಳು ಇಂತಹ ಅವಕಾಶದ ಸದ್ಬಳಕೆ ಮೂಲಕ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಸ್ವರ್ದಿಸುವ ಎಲ್ಲಾ ಸಂದರ್ಬಗಳನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿದೆ ಎಂದರು.
ರಾಜಕೀಯ ಬೇಡ: ಅಧ್ಯಕ್ಷತೆ ವಹಿಸಿದ್ದ ಜಿ.ಪಂ ಮಾಜಿ ಸದಸ್ಯ ಹಾಲಪ್ಪ ಮಾತನಾಡಿ,ದೈಹಿಕವಾಗಿ ಸಬಲರಾಗಲು ಪ್ರತಿಯೊಬ್ಬರಿಗೂ ಕ್ರೀಡೆ ಅವಶ್ಯಕವಾಗಿದ್ದು ಈ ದಿಸೆಯಲ್ಲಿ ಬಾಲ್ಯದಿಂದಲೇ ಕ್ರೀಡೆಯ ಬಗ್ಗೆ ಒಲವನ್ನು ಹೊಂದಬೇಕಾಗಿದೆ ಎಂದ ಅವರು ಕ್ರೀಡೆಯಲ್ಲಿ ಸೋಲು ಗೆಲವು ಅನಿವಾರ್ಯವಾಗಿದ್ದು ರಾಜಕೀಯಕ್ಕೆ ಅವಕಾಶ ಕಲ್ಪಿಸದೆ ಕೇವಲ ಕ್ರೀಡಾ ಮನೋಭಾವನೆಯನ್ನು ಬೆಳಸಿಕೊಂಡು ಉತ್ತಮ ಕ್ರೀಡಾಪಟುಗಳನ್ನು ಗುರುತಿಸಬೇಕಾದ ಜವಾಬ್ದಾರಿ ಕ್ರೀಡಾಕೂಟದ ಆಯೋಜಕರದ್ದಾಗಿದೆ ಎಂದರು.
 ಈ ಸಂದರ್ಭದಲ್ಲಿ ಸ.ಪ.ಪೂ ಕಾಲೇಜಿನ ಪ್ರಾಚಾರ್ಯ ಎಂ.ನಾಗರಾಜಪ್ಪ,ಬಾಲಕಿಯರ ಸ.ಪ.ಪೂ ಕಾಲೇಜಿನ ಪ್ರಾಚಾರ್ಯ ಪ್ರಕಾಶ್ಬಾಬು,ಸಂಯುಕ್ತ ಸ.ಪ.ಪೂ ಕಾಲೇಜಿನ ಪ್ರಾಚಾರ್ಯ ವಿರೂಪಾಕ್ಷಪ್ಪ,ಪ್ರಸನ್ನಕುಮಾರ್,ಹನುಮಂತಪ್ಪ,ರವಿಕುಮಾರ್ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement