ಗಣಪತಿ ವಿಸರ್ಜನೆ; ನಗರದೆಲ್ಲೆಡೆ ಮದ್ಯ ಮಾರಾಟ ನಿಷೇಧ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಮುಖ ಮತ್ತು ಅತೀ ಸೂಕ್ಷ್ಮತೆಯಿಂದ ಕೂಡಿರುವ ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಯ್ದ ದಿನಾಂಕಗಳಂದು ನಿಗದಿಪಡಿಸಿದ ಸಮಯ ಮತ್ತು ಪ್ರದೇಶದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವಿಫುಲ್ ಬನ್ಸಲ್ ಅವರು ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಮದ್ಯ ಮಾರಾಟದ ಅಂಗಡಿಗಳನ್ನು ಮುಚ್ಚುವಂತೆ, ಚಿಲ್ಲರೆ ಮತ್ತು ಸಗಟು ಮಾರಾಟ ಹಾಗೂ ಮದ್ಯವನ್ನು ಸಾಗಾಟ ಮಾಡದಂತೆ ಮದ್ಯ ಮಾರಾಟಗಾರರಿಗೆ ಸೂಚಿಸಿರುವ ಜಿಲ್ಲಾಧಿಕಾರಿಗಳು ಶಾಂತಿಯುತವಾಗಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಗಣೇಶನ ಮೂರ್ತಿಗಳನ್ನು ವಿಸರ್ಜಿಸಲು ಅನುವು ಮಾಡಿಕೊಡುವ ಮೂಲಕ, ಹಬ್ಬದ ಸಂಭ್ರಮದಲ್ಲಿ ಭಾಗಿದಾರರಾಗುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ: ಸೆಪ್ಟಂಬರ್ 14ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 15ರ ಮಧ್ಯರಾತ್ರಿ 12 ಗಂಟೆಯವರೆಗೆ, ಸೆಪ್ಟಂಬರ್ 16ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ, ಸೆಪ್ಟಂಬರ್ 24ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 27ರ ಬೆಳಿಗ್ಗೆ 7 ಗಂಟೆಯವರೆಗೆ ಶಿವಮೊಗ್ಗ ನಗರ ಮತ್ತು ನಗರದ ಸುತ್ತಮುತ್ತಲ 5 ಕಿ.ಮೀ. ವ್ಯಾಪ್ತಿಯಲ್ಲಿ, ಸೆಪ್ಟಂಬರ್ 16ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 17ರ ಮಧ್ಯರಾತ್ರಿ 12 ಗಂಟೆ ಯವರೆಗೆ ಹಾರ್ನಳ್ಳಿ ಮತ್ತು ಹಾರ್ನಳ್ಳಿ ಸುತ್ತಮುತ್ತಲ 5 ಕಿ.ಮೀ. ಪ್ರದೇಶದ ವ್ಯಾಪ್ತಿಯಲ್ಲಿ, ಸೆಪ್ಟಂಬರ್ 18ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 19ರ ಮಧ್ಯರಾತ್ರಿ 12 ಗಂಟೆಯವರೆಗೆ ಆಯನೂರು ಮತ್ತು ಆಯನೂರು ಸುತ್ತಮುತ್ತಲ 5 ಕಿ.ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಭದ್ರಾವತಿ ತಾಲೂಕು: ಸೆಪ್ಟಂಬರ್ 12ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 13ರ ಮಧ್ಯರಾತ್ರಿ 12 ಗಂಟೆಯವರೆಗೆ, ಸೆಪ್ಟಂಬರ್ 16ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 17ರ ಮಧ್ಯರಾತ್ರಿ 12ಗಂಟೆಯವರೆಗೆ ಭದ್ರಾವತಿ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಹಾಗೂ ಸೆಪ್ಟಂಬರ್ 27ರ ಬೆಳಿಗ್ಗೆ 10 ಗಂಟೆಯಿಂದ ಸೆಪ್ಟಂಬರ್ 28ರ ಬೆಳಿಗ್ಗೆ 10 ಗಂಟೆಯವರೆಗೆ, ಸೆಪ್ಟಂಬರ್ 29ರ ಬೆಳಿಗ್ಗೆ 10 ಗಂಟೆಯಿಂದ ಸೆಪ್ಟಂಬರ್ 30ರ ಬೆಳಿಗ್ಗೆ 10 ಗಂಟೆಯವರೆಗೆ ಹೊಳೆಹೊನ್ನೂರಿನಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಸಾಗರ ತಾಲೂಕು: ಸೆಪ್ಟಂಬರ್ 12ರ ಸಂಜೆ 6 ಗಂಟೆಯಿಂದ ಸೆಪ್ಟಂಬರ್ 13ರ ಮಧ್ಯರಾತ್ರಿ 12ಗಂಟೆಯವರೆಗೆ ಸಾಗರ ಪಟ್ಟಣ ಮತ್ತು ತಾಲೂಕಿನಲ್ಲಿ, ಸೆಪ್ಟಂಬರ್ 18ರ ಸಂಜೆ 6 ಗಂಟೆಯಿಂದ ಸೆಪ್ಟಂಬರ್ 19ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ್ತು ಸೆಪ್ಟಂಬರ್ 20ರ ಬೆಳಿಗ್ಗೆ 6 ಗಂಟೆಯಿಂದ ಸೆಪ್ಟಂಬರ್ 22ರ ಬೆಳಿಗ್ಗೆ 6 ಗಂಟೆಯವರೆಗೆ ಸಾಗರ ಪಟ್ಟಣ ಮತ್ತು 10-15 ಕಿ.ಮೀ. ವ್ಯಾಪ್ತಿಯಲ್ಲಿನ ಆವಿನಹಳ್ಳಿ, ತಾಳಗುಪ್ಪ ಮತ್ತು ತ್ಯಾಗರ್ತಿ ಗ್ರಾಮಗಳಲ್ಲಿ ಮದ್ಯಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಹೊಸನಗರ ತಾಲೂಕು: ಸೆಪ್ಟಂಬರ್ 12ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 14ರ ಬೆಳಿಗ್ಗೆ 10 ಗಂಟೆಯವರೆಗೆ ರಿಪ್ಪನ್ ಪೇಟೆಯ ಗರ್ತಿಕೆರೆ ಗ್ರಾಮದಲ್ಲಿ, ಸೆಪ್ಟಂಬರ್ 16ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 19ರ ಬೆಳಿಗ್ಗೆ 6 ಗಂಟೆಯವರೆಗೆ ರಿಪ್ಪನ್ ಪೇಟೆ ಪಟ್ಟಣದಲ್ಲಿ ಹಾಗೂ ಸೆಪ್ಟಂಬರ್ 16ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಹೊಸನಗರ ಪಟ್ಟಣದಲ್ಲಿ ಮದ್ಯಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಸೊರಬ: ಸೆಪ್ಟಂಬರ್ 12ರ ಮಧ್ಯರಾತ್ರಿ 12ಗಂಟೆಯಿಂದ ಸೆಪ್ಟಂಬರ್ 13ರ ಮಧ್ಯರಾತ್ರಿ 12ಗಂಟೆಯವರೆಗೆ ಸೊರಬ ತಾಲೂಕಿನಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಶಿಕಾರಿಪುರ: ಸೆಪ್ಟಂಬರ್ 16ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 17ರ ಮಧ್ಯರಾತ್ರಿ 12ಗಂಟೆಯವರೆಗೆ, ಸೆಪ್ಟಂಬರ್ 20ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 21ರ ಮಧ್ಯರಾತ್ರಿ 12ಗಂಟೆಯವರೆಗೆ ಮತ್ತು ಸೆಪ್ಟಂಬರ್ 22ರ ಮಧ್ಯರಾತ್ರಿ 12ಗಂಟೆಯಿಂದ ಸೆಪ್ಟಂಬರ್ 23ರ ಮಧ್ಯರಾತ್ರಿ 12 ಗಂಟೆಯವರೆಗೆ ಶಿಕಾರಿಪುರ ಪಟ್ಟಣದಲ್ಲಿ
ಹಾಗೂ ಸೆಪ್ಟಂಬರ್ 22ರ ಮಧ್ಯರಾತ್ರಿ 12 ಗಂಟೆಯಿಂದ ಸೆಪ್ಟಂಬರ್ 23ರ ಮಧ್ಯರಾತ್ರಿ 12ಗಂಟೆಯವರೆಗೆ ಶಿರಾಳಕೊಪ್ಪ ಪಟ್ಟಣ ಪ್ರದೇಶದ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.