ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕಾಂಗ್ರೆಸ್ ಬೆಂಬಲಿಸಿ: ಭಂಡಾರಿ

Rashmi Kasaragodu
Updated On : 8 Apr 2014, 11:20 am

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಭ್ರಷ್ಟಾಚಾರ ನಡೆಸಿ, ತಮ್ಮ ಸ್ವ ಅಭಿವೃದ್ಧಿಯನ್ನೇ ದೇಶದ ಅಭಿವೃದ್ಧಿ ಎನ್ನುತ್ತಿದ್ದಾರೆ. ಖಾಸಗಿ ಕಾಲೇಜು, ಆಸ್ಪತ್ರೆ, ಹೋಟೆಲ್ ನಿರ್ಮಿಸಿಕೊಂಡು ಮತದಾರರಿಗೆ ವಂಚಿಸುತ್ತಿದ್ದಾರೆ. ನಿಜಕ್ಕೂ ಕ್ಷೇತ್ರದ ಅಭಿವೃದ್ಧಿ ಮಾಡುವ ಇಚ್ಛೆ ಇದ್ದಿದ್ದರೆ, ಸರ್ಕಾರಿ ಕಾಲೇಜು, ಆಸ್ಪತ್ರೆ ನಿರ್ಮಾಣ ಮಾಡಬೇಕಿತ್ತು ಎಂದು ಶಿವಮೊಗ್ಗದ ಲೋಕಸಭಾ ಕ್ಷೇತ್ರದ ಕಾಂಗ್ರೆಸ್
ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೋಡ್ ಶೋ, ಪ್ರಚಾರ ಸಭೆ ನಡೆಸಿ ಮಾತನಾಡಿ, ಜೆಡಿಎಸ್ ಜಾತಿ ಆಧಾರದಲ್ಲಿ ರಾಜಕಾರಣ ಮಾಡುತ್ತಿದೆ ಎಂದು ದೂರಿದ ಅವರು, ಕಾಂಗ್ರೆಸ್ ಪಕ್ಷವೊಂದೇ ಜಾತ್ಯತೀತವಾಗಿ ಆಡಳಿತ ನಡೆಸಬಲ್ಲದು. ಈ ಬಾರಿ ಯುವಕರ ಕಣ್ಮಣಿಯಾದ ರಾಹುಲ್‌ಗಾಂಧಿ ಅವರು ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಮತದಾರರು ಕಾಂಗ್ರೆಸ್ ಬೆಂಬಲಿಸಬೇಕು ಎಂದರು.
ಕಾಂಗ್ರೆಸ್ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆ ಮೂಲಕ ದೇಶದ ಎಲ್ಲಾ ಭಾಗದ ಗ್ರಾಮೀಣರಿಗೆ ಉದ್ಯೋಗ ಸೃಷ್ಟಿ ಮಾಡಿದೆ. ಇದರಿಂದಾಗಿ ರೈತಾಪಿ ವರ್ಗದ ಜನತೆಗೆ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿದೆ ಎಂದರು.
ಮಂಜುನಾಥ ಭಂಡಾರಿ ಅವರು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಬ್ಬಲಗೆರೆ, ಕುಂಸಿ, ಆಯನೂರು ಹಸೂಡಿ, ಯಡೇಹಳ್ಳಿ, ಆಗರದಹಳ್ಳಿ ಸೇರಿದಂತೆ ವಿವಿಧೆಡೆ ರೋಡ್ ಶೋ, ಪ್ರಚಾರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಹಾಜರಿದ್ದರು. ಇವರೊಂದಿಗೆ ಮಾಜಿ ಶಾಸಕ ಟಿ. ಕರಿಯಣ್ಣ, ಡಿಸಿಸಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಮುಖಂಡ ಎನ್. ರಮೇಶ್, ರವಿಕುಮಾರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement