ಬಿಎಸ್‌ವೈಗೆ ಮತ ನೀಡಿದರೆ ಒಕ್ಕಲಿಗಲಿಗರಿಗೆ ಹೆಮ್ಮೆ: ತೇಜಸ್ವಿನಿ
ಶಿವಮೊಗ್ಗ: ರಾಜಕೀಯದ ಎರಡನೇ ಇನ್ನಿಂಗ್ಸ್‌ನಲ್ಲಿ ಯಡಿಯೂರಪ್ಪನವರು ಗೆಲ್ಲಲು ಕ್ಷೇತ್ರದ ಜನರು ಮತ ನೀಡಬೇಕು. ಅದೇ ರೀತಿ, ಬಿಜೆಪಿ ಹಾಗೂ ಯಡಿಯೂರಪ್ಪನವರಿಗೆ ಮತ ನೀಡುವುದು ಒಕ್ಕಲಿಗರಿಗೆ ಹೆಮ್ಮೆಯ ವಿಷಯ ಎಂದು ಮಾಜಿ ಸಂಸದೆ ತೇಜಸ್ವಿನಿ ಗೌಡ ಪ್ರತಿಪಾದಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯು ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡಿದೆ. ಡಿ.ವಿ. ಸದಾನಂದಗೌಡರನ್ನು ಮುಖ್ಯಮಂತ್ರಿಯನ್ನಾಗಿ ಆರ್. ಅಶೋಕ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಏರಿಸಿತು ಎಂದು ಹೇಳಿದರು. ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಎಲ್ಲಾ ವರ್ಗದ ಜನರಿಗೆ ಆದ್ಯತೆ ನೀಡಿದ್ದಾರೆ. ಇದರಿಂದಾಗಿಯೇ ಜನನಾಯಕರಾಗಿ ಹೊರ ಹೊಮ್ಮಲು ಸಾದ್ಯವಾಯಿತು ಎಂದ ಅವರು, ಯಡಿಯೂರಪ್ಪ ಸಂಸದರಾದರೆ ರಾಷ್ಟ್ರ ರಾಜಕಾರಣದಲ್ಲಿ ಮೋದಿ ಅವರೊಂದಿಗೆ ಅಭಿವೃದ್ಧಿ ಕೆಲಸಗಳಲ್ಲಿ ಭಾಗಿಯಾಗುತ್ತಾರೆ. ಇದರಿಂದ ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಯೂ ಸಾಧ್ಯ ಎಂದರು.
ಢಿಬಿಎಸ್‌ವೈ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರ ನಾಯಕತ್ವ ತುಳಿಯಲು ಕಾಂಗ್ರೆಸ್ ಷಡ್ಯಂತ್ರ ರೂಪಿಸಿತ್ತು ಎಂದು ಆರೋಪಿಸಿದರು.
ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಮಹಿಳಾ ಮುಖಂಡರಾದ ಸುವರ್ಣ ಶಂಕರ್ ಮುಂತಾದವರು ಇದ್ದರು.