ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬಿಜೆಪಿಯಿಂದ ಮಹಿಳೆಯರ ರಕ್ಷಣೆ ಅಸಾಧ್ಯ

Mainashree
Updated On : 12 Apr 2014, 11:05 am

ಶಿವಮೊಗ್ಗ: ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದ ವೇಳೆ ಮಹಿಳೆಯರ ಮೇಲೆ ಸಾಕಷ್ಟು ದೌರ್ಜನ್ಯ ನಡೆಯಿತು. ರಘುಪತಿ ಭಟ್ ಪತ್ನಿ ಆತ್ಮಹತ್ಯೆ ಪ್ರಕರಣ, ಮಂಗಳೂರಿನ ಪಬ್ ದಾಳಿ, ವಿಧಾನಸಭೆಯಲ್ಲಿಯೇ ಮೂವರು ಶಾಸಕರ ಅಶ್ಲೀಲ ಚಿತ್ರ ವೀಕ್ಷಣೆ ಇವೆಲ್ಲವೂ ಇದಕ್ಕೆ ಸಾಕ್ಷಿ. ಬಿಜೆಪಿಯಿಂದ ಮಹಿಳೆಯರ ರಕ್ಷಣೆ ಅಸಾಧ್ಯ ಎಂಬುದಕ್ಕೆ ಈ ಉದಾಹರಣೆಗಳೇ ಸಾಕು ಎಂದು ಮಾಜಿ ಸಚಿವೆ ಮೋಟಮ್ಮ ಹೇಳಿದ್ದಾರೆ.
ನಗರದ ಸಂತ ಥಾಮಸ್ ಸಮುದಾಯ ಭವನದಲ್ಲಿ ಶುಕ್ರವಾರ ಕಾಂಗ್ರೆಸ್ ಆಯೋಜಿಸಿದ್ದ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.
ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರ ವೇಷಭೂಷಣಗಳು ಭಾರತೀಯ ಸಂಸ್ಕೃತಿಗೆ ಅನುಗುಣವಾಗಿದೆ.  ಹೀಗಾಗಿ ಸೋನಿಯಾಗಾಂಧಿ ಅವರನ್ನು ವಿದೇಶಿ ಮಹಿಳೆ ಎಂದು ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದ ಅವರು, ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುವ ಶೋಭಾ ಕರಂದ್ಲಾಜೆ ಅವರು ರಘುಪತಿ ಭಟ್ ಪತ್ನಿ ಆತ್ಮಹತ್ಯೆ ಪ್ರಕರಣದಲ್ಲಿ ಮೌನ ವಹಿಸಿದ್ದೇಕೆ ಎಂದು ಪ್ರಶ್ನಿಸಿದರು.
ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸಿದ ಪಕ್ಷ ಕಾಂಗ್ರೆಸ್ ಮಾತ್ರ. ಮಹಿಳೆಯರಿಗೆ ರಾಜಕೀಯ ಮೀಸಲಾತಿ ಸೌಲಭ್ಯ ಕಲ್ಪಿಸಿದವರು ರಾಜೀವ್ ಗಾಂಧಿ ಎಂದ ಅವರು, ದೇಶದಲ್ಲಿ ಶೇ. 50ಕ್ಕಿಂತ ಹೆಚ್ಚು ಮಹಿಳಾ ಮತದಾರರಿದ್ದಾರೆ.
ಹೀಗಾಗಿ ಚುನಾವಣೆಯಲ್ಲಿ ಮಹಿಳೆಯರ ಮತದಾನ ನಿರ್ಣಾಯಕ ಪಾತ್ರ ವಹಿಸಲಿದೆ. ಹೀಗಾಗಿ ವಿವೇಚನೆಯಿಂದ ಮತ ಚಲಾಯಿಸುವಂತೆ ವಿನಂತಿಸಿದರು.
ಆತಂಕವಾದಿ: ಭಾರತವು ಅಹಿಂಸವಾದ ತತ್ವದ ಆಧಾರದ ಮೇಲೆ ನಡೆದುಕೊಂಡು ಬಂದಿದೆ. ಇಲ್ಲಿ ಹಿಂಸೆಗೆ ಅವಕಾಶವಿಲ್ಲ. ಎಲ್ಲ ವರ್ಗಗಳನ್ನು ಸಮಾನವಾಗಿ ಕಾಣುವ ಜಾತ್ಯತೀತ ಮನೋಭಾವವುಳ್ಳ ವ್ಯಕ್ತಿಗಳ ಕೈಯಲ್ಲಿ ದೇಶದ ಆಡಳಿತ ಚುಕ್ಕಾಣಿ ಸಿಗಬೇಕು. ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ದೇಶವನ್ನು ವಿಭಜಿಸಲು ಹೊರಟಿರುವ ಆತಂಕವಾದಿ ಎಂದರು.
ಶಾಸಕ ಕೆ.ಬಿ. ಪ್ರಸನ್ನಕುಮಾರ್, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ್, ಪ್ರಫುಲ್ಲಾ ಮಧುಕರ್, ಗೀತಾ ಮತ್ತಿತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement