ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅಂಬೇಡ್ಕರ್ ಜಯಂತಿ ಆಚರಣೆ

Lingaraj Badiger
Updated On : 15 Apr 2014, 10:32 am

ಭದ್ರಾವತಿ:  ಪಟ್ಟಣದಲ್ಲಿ ಭಾರತರತ್ನ ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಹಲವೆಡೆ ಆಚರಿಸಲಾಯಿತು.
ಮೈಸೂರು ಕಾಗದ ಕಾರ್ಖಾನೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಕಾರ್ಖಾನೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಬಿ.ಪಿ. ರವೀಂದ್ರನಾಥ್ ಉದ್ಘಾಟಿಸಿದರು. ಸಾರ್ವಜನಿಕ ಸಂಪರ್ಕ ಪ್ರಬಂಧಕ ಜಿ.ಎ. ಷಾ, ನಗರಾಡಳಿತ ಪ್ರಬಂಧಕ ಶಾಮಸುಂದರ್, ಎಂಪಿಎಂ ಉದ್ಯೋಗಿಗಳ ಸಂಘದ ಅಧ್ಯಕ್ಷ ಎಸ್.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಡಿ.ಕೆ.ಶ್ರೀನಿವಾಸ್, ಖಜಾಂಚಿ ಮಂಜುನಾಥ್, ಕಾರ್ಖಾನೆಯ ಅನೇಕ ಅಧಿಕಾರಿಗಳು, ಗುತ್ತಿಗೆ ಮತ್ತು ಅರಣ್ಯ ಕಾರ್ಮಿಕರು ಹಾಜರಿದ್ದರು.
ತಾಲೂಕು ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ತಹಸೀಲ್ದಾರ್ ಸಿದ್ದಮಲ್ಲಪ್ಪ ಉದ್ಘಾಟನೆ ನೆರವೇರಿಸಿದರು. ಮಹಿಳಾ ಮತ್ತು ಶಿಶುಯೋಜನಾಭಿವೃದ್ಧಿ ಅಧಿಕಾರಿ ಚಂದ್ರಪ್ಪ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ  ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement