ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ಯಡಿಯೂರಪ್ಪಗೆ ವ್ಯಾಪಕ ಬೆಂಬಲ'

Rashmi Kasaragodu
Updated On : 17 Apr 2014, 10:28 am

ಸಾಗರ: ಯಡಿಯೂರಪ್ಪ ಅವರಿಗೆ ಲೋಕಸಭಾ ಕ್ಷೇತ್ರದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಅವರು 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸುತ್ತಾರೆ ಎಂದು ನಮೋ ಬ್ರಿಗೇಡ್ ತಾಲೂಕು ಸಂಚಾಲಕ ಕೆ.ಎಲ್. ಭೋಜರಾಜ್ ಹೇಳಿದರು.
 ಇಲ್ಲಿನ ಮಾರಿಕಾಂಬಾ ಹಮಾಲರ ಸಂಘವು ಬುಧವಾರ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸಿದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸುವ ಕಾರ್ಯಕ್ರಮದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ದಿ ಕೆಲಸಗಳು ಈ ಚುನಾವಣೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ಮೋದಿ ಅಲೆ: ರಾಜ್ಯದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಅಲೆ ವ್ಯಾಪಕವಾಗಿದೆ. ಅನೇಕ ಪಕ್ಷಗಳು ಈಗಾಗಲೆ ಬಿಜೆಪಿ ಜೊತೆ ಮೈತ್ರಿಗೆ ಕೈಜೋಡಿಸಿದ್ದು, ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಇನ್ನಷ್ಟು ಪಕ್ಷಗಳು ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರಕ್ಕೆ ಬೆಂಬಲ ಸೂಚಿಸಲಿದೆ. ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ದೇಶದ ಜನರು ಬಿಜೆಪಿಗೆ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ತಂದು ಕೊಡಲಿದ್ದಾರೆ ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಗೆ ಯಾರೂ ಪ್ರತಿಸ್ಪರ್ಧಿಗಳಿಲ್ಲ. ಜಿಲ್ಲೆಯ ಜನರು ಪ್ರಜ್ಞಾವಂತರಿದ್ದು, ಯಾರಿಗೆ ಮತ ಚಲಾವಣೆ ಮಾಡಿದರೆ ಜಿಲ್ಲೆಯ ಅಭಿವೃದ್ದಿ ಸಾಧ್ಯ ಎನ್ನುವುದನ್ನು ಅರಿತುಕೊಂಡಿದ್ದಾರೆ. ಸತತ 4 ದಶಕಗಳಿಂದ ಎಲ್ಲ ವರ್ಗದ ಏಳಿಗೆಗಾಗಿ ದುಡಿಯುತ್ತಿರುವ ಬಿ.ಎಸ್. ಯಡಿಯೂರಪ್ಪ ಸಮರ್ಥ ಅಭ್ಯರ್ಥಿಯಾಗಿದ್ದು, ಸಂಸದರಾಗಿ ಜಿಲ್ಲೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಜೊತೆಗೆ ಹೆಚ್ಚಿನ ಅಭಿವೃದ್ದಿ ಅವರಿಂದ ಮಾತ್ರ ಸಾಧ್ಯ ಎಂದರು.
ಈ ಸಂದರ್ಭದಲ್ಲಿ ನಮೋ ಬ್ರಿಗೇಡ್ನ ಕಾರ್ಯದರ್ಶಿ ದೀಪು ಸಾಗರ್, ಮಾರಿಕಾಂಬಾ ಹಮಾಲರ ಸಂಘದ ಅಧ್ಯಕ್ಷ ಲಕ್ಷ್ಮಣರಾವ್ ಬಾಪಟ್, ಕಾರ್ಯದರ್ಶಿ ಗೋವಿಂದ ಕೆ.ಆರ್., ಖಜಾಂಚಿ ಎಚ್. ಸೇಟು, ಪ್ರಮುಖರಾದ ಲಕ್ಷ್ಮಣ, ಕೃಷ್ಣ, ಶಬ್ಬೀರ್, ಕರೀಮ್, ದುರ್ಗಾ, ಭಾಸ್ಕರ್ ಎನ್.ಎಸ್. ಇನ್ನಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement