ಅಂತ್ಯಾಕ್ಷರಿ, ರಸಪ್ರಶ್ನೆ 23ರಂದು
ಶಿವಮೊಗ್ಗ: ಇಲ್ಲಿನ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಏಪ್ರಿಲ್ 23ರಂದು ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿಯವರ ಹುಟ್ಟುಹಬ್ಬದ ಅಂಗವಾಗಿ ಕಾರ್ಯಕ್ರಮ ಆಯೋಜಿಸಿದೆ.
ಸಾರ್ವಜನಿಕರು ಹಾಗೂ ಮಕ್ಕಳಿಗಾಗಿ ರಸಪ್ರಶ್ನೆ ಮತ್ತು ಅಂತ್ಯಾಕ್ಷರಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಮಥುರಾ ಪ್ಯಾರಡೈಸ್ಸ್‌ಭಾಂಗಣದಲ್ಲಿ ಅಂದು ಮಧ್ಯಾಹ್ನ 3ಗಂಟೆಯಿಂದ ನಡೆಯಲಿದೆ.
ಪ್ರವೇಶ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು. ಮೊ.ಸಂ.99451 50204.