ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬಿಎಸ್‌ವೈ ದಾಖಲೆಯ ಜಯ: ಅನ್ವರ್‌ಸಾಬ್

Mainashree
Updated On : 21 Apr 2014, 10:58 am

ಶಿಕಾರಿಪುರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದ ದಾಖಲೆಯ ಜಯಗಳಿಸಲಿದ್ದಾರೆ ಎಂದು ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸಂಚಾಲಕ ಜಿ. ಅನ್ವರ್ ಸಾಬ್ ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕಾ ಹೇಳಿಕೆಯಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿರುವ ಅವರು, ಸತತ ಜನಪರ ಹೋರಾಟದ ಮೂಲಕ ರಾಜಕೀಯದಲ್ಲಿ ತಮ್ಮದೇ ವರ್ಚಸ್ಸು ಗಳಿಸಿರುವ ಯಡಿಯೂರಪ್ಪ ಶಾಸಕರಾಗಿ, ವಿರೋಧಪಕ್ಷದ ನಾಯಕರಾಗಿ, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ಈಗ ಪಕ್ಷದ ಮುಖಂಡರ ಒತ್ತಾಸೆಯ ಮೇರೆಗೆ ಲೋಕಸಭೆಗೆ ಸ್ಪರ್ಧಿಸಿದ್ದಾರೆ. ತಮಗೆ ದೊರೆತ ಅಧಿಕಾರಾವಧಿಯಲ್ಲಿ ಎಲ್ಲಾ ವರ್ಗದ ಜನತೆಗೆ ಯೋಜನೆಗಳನ್ನು ರೂಪಿಸುವ ಮೂಲಕ ಜನನಾಯಕರಾಗಿದ್ದಾರೆ ಎಂದು ಹೊಗಳಿದರು.
ಶಿವಮೊಗ್ಗ ಜಿಲ್ಲೆ ಹಾಗೂ ಶಿಕಾರಿಪುರ ತಾಲೂಕನ್ನು ಅಭಿವೃದ್ಧಿಗೊಳಿಸಿ ದೇಶ ಹಾಗೂ ರಾಜ್ಯದ ನಕ್ಷೆಯಲ್ಲಿ ಮಾದರಿ ಕ್ಷೇತ್ರಗಳನ್ನಾಗಿಸಿದ ಅವರು, ಹರಿಜನ, ಗಿರಿಜನ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಕಾಯಕ ಪ್ರಶ್ನಾತೀತವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಅವರು ದಾಖಲೆಯ ಜಯ ಗಳಿಸುವುದು ನಿಶ್ಚಿತ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement