ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ಅಮಾಯಕನ ಮೇಲೆ ಗುಂಡಿನ ದಾಳಿ ದುರದೃಷ್ಟಕರ'

Rashmi Kasaragodu
Updated On : 22 Apr 2014, 10:44 am

ಶಿವಮೊಗ್ಗ: ಶೃಂಗೇರಿ ತಾಲೂಕು ತನಿಕೋಡು ಅರಣ್ಯ ತಪಸಾಣಾ ಕೇಂದ್ರದ ಬಳಿ ನಕ್ಸಲ್ ನಿಗ್ರಹದಳದ ಸಿಬ್ಬಂದಿಯು ಕಬೀರ್ ಎಂಬ ಅಮಾಯಕನ ಮೇಲೆ ಗುಂಡಿನ ದಾಳಿ ನಡೆಸಿರುವುದು ದುರದೃಷ್ಟಕರ ಎಂದು ಕೆಪಿಸಿಸಿ ಕಿಸಾನ್ ಕಾಂಗ್ರೆಸ್ ಉಪಾಧ್ಯಕ್ಷ ಸಚಿನ್ ಮೀಗಾ ಅಭಿಪ್ರಾಯಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿಯ ಅನುಮಾನಾಸ್ಪದ ನಡವಳಿಕೆ ಈ ಘಟನೆಗೆ ಕಾರಣ ಎನ್ನಲಾಗುತ್ತಿದ್ದರೂ ಈ ಕುರಿತು ಕುಲಂಕಷ ತನಿಖೆ ಅಗತ್ಯವಾಗಿದೆ. ಇದೇ ಸಂದರ್ಭದಲ್ಲಿ ಮೃತ ವ್ಯಕ್ತಿಯ ಕುಟುಂಬ ವರ್ಗದ ವಾಹನಗಳ ಮೇಲೆ ಕಿಡಿಗೇಡಿಗಳು ನಡೆಸಿರುವ ಹಲ್ಲೆ ಖಂಡನೀಯ. ಈ ಘಟನೆಗೆ ಕಾರಣವಾದ ವ್ಯಕ್ತಿಗಳನ್ನು ಕೂಡಲೆ ಬಂಧಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ಜಾನುವಾರ ಸಾಗಣೆ ತಡೆಗೆ ತಾಲೂಕು ಆಡಳಿತ ಕ್ರಮ ವಹಿಸಬೇಕು. ಉರಿವ ಮನೆಯಲ್ಲಿ ಗಳ ಹಿರಿಯುವವರಂತೆ ಮೃತ ವ್ಯಕ್ತಿಯ ಅಪರಾಧಿ ಹಿನ್ನೆಲೆ ಇಟ್ಟುಕೊಂಡು ಈ ಸಾವನ್ನು ಮರಣದಂಡನೆ ಎಂಬಂತೆ ಬಿಂಬಿಸಹೊರಟಿರುವ ವ್ಯಕ್ತಿ, ಶಕ್ತಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಚಿನ್ ಒತ್ತಾಯಿಸಿದ್ದಾರೆ. ಸರ್ಕಾರ ಘಟನೆಯ ನ್ಯಾಯಾಂಗ ತನಿಖೆಗೆ ಆದೇಶಿಸಿರುವುದಲ್ಲದೆ ಮೃತ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿರುವುದನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement