ಇಂದು ಜಿಲ್ಲಾಮಟ್ಟದ ಬೇಸಿಗೆ ಶಿಬಿರ
ಶಿವಮೊಗ್ಗ: ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಏ.23 ರಿಂದ ಮೇ 2 ರವರೆಗೆ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಏರ್ಪಡಿಸಿದೆ.
ಏ.23 ರಂದು ಬೆಳಗ್ಗೆ 10 ಗಂಟೆಗೆ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಸಿಕಾಂತ್ ಸೆಂಥಿಲ್ ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಲಕ್ಷ್ಮೀಕಾಂತಮ್ಮ ಅಧ್ಯಕ್ಷತೆ ವಹಿಸುವರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಸಿ. ಬಸವರಾಜಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಚ್. ಕೃಷ್ಣ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ., ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹಾಲಾನಾಯ್ಕ, ದುರ್ಗಿಗುಡಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಅನಿತಾ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಮೇ 2 ರಂದು ಸಂಜೆ 4 ಗಂಟೆಗೆ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.