ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ತಿಂಗಳ ಅತಿಥಿ ಕಾರ್ಯಕ್ರಮ ದಿವಾಕರ್‌ರಿಂದ ಉಪನ್ಯಾಸ

Rashmi Kasaragodu
Updated On : 26 Apr 2014, 11:13 am

ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ ಏ.25
ಕರ್ನಾಟಕ ಸಂಘದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಏ.26ರಂದು ಸಂಜೆ 5.30 ಗಂಟೆಗೆ ಲೇಖಕ ಎಸ್. ದಿವಾಕರ್ 'ಅತಿ ಸಣ್ಣ ಕಥೆಗಳು' ಕುರಿತು ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಸಂಘದ ಅಧ್ಯಕ್ಷೆ ವಿಜಯಾ ಶ್ರೀಧರ್ ವಹಿಸಲಿದ್ದಾರೆ.
ವೃತ್ತಿಯಿಂದ ಪತ್ರಕರ್ತರಾದ ದಿವಾಕರ್, ಪ್ರೆಸ್ ಇನ್‌ಫಾರ್ಮೇಷನ್ ಬ್ಯೂರೋ, ಸಂಯುಕ್ತ ಕರ್ನಾಟಕ, ಮಲ್ಲಿಗೆ, ಸುಧಾ, ಪ್ರಜಾವಾಣಿ, ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಹ ಸಂಪಾದಕರಾಗಿ, ಸಂಪಾದಕರಾಗಿ, ಸಂಪಾದಕೀಯ ಮಂಡಳಿಯ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಿದವರು. 1989ರಿಂದ 2005ರವರೆಗೆ ಚನ್ನೈನ ಅಮೇರಿಕನ್ ಕಾನ್ಸುಲೇಟ್ ಕಚೇರಿಯಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಸಣ್ಣಕಥೆ, ಕಾವ್ಯ, ಪ್ರಬಂಧ, ವಿಮರ್ಶೆ, ಭಾಷಾಂತರ, ಅಂಕಣ ಬರಹ ಸೇರಿದಂತೆ ನಾನಾ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿಯನ್ನೂ ಮಾಡಿರುವ ಇವರು, 2002ರಲ್ಲಿ ಅಮೆರಿಕದ ಅಯೋವಾ ವಿಶ್ವವಿದ್ಯಾಲಯ ಆಯೋಜಿಸಿದ್ದ ಅಂತಾರಾಷ್ಟ್ರೀಯ ಲೇಖಕರ ಸಮ್ಮೇಳನದಲ್ಲಿ ಪ್ರಬಂಧ ಮಂಡಿಸಿ ಗಮನ ಸೆಳೆದಿದ್ದಾರೆ.
ಇವರಿಗೆ ಭಾರತ ಸರ್ಕಾರದ ಸೀನಿಯರ್ ಫೆಲೋಷಿಪ್ ಪುರಸ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರೈಟರ್ ಇನ್ ರೆಸಿಡೆನ್ಸ್ ಪುರಸ್ಕಾರ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಶಿವರಾಮ ಕಾರಂತ ಪ್ರಶಸ್ತಿ, ಶ್ರೀಧರ ಸಾಹಿತ್ಯ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಕೋಲ್ಕತ್ತಾದ ಹಿಂದಿ ಪುರಸ್ಕಾರ್ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಸಂದಿವೆ.
ಸಾಹಿತ್ಯಾಸಕ್ತರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಾರ್ಯದರ್ಶಿ ಡಾ. ನಾಗಭೂಷಣ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement