ಶಾಸಕರಿಂದ ಕಾಮಗಾರಿ ಪರಿಶೀಲನೆ
ಕ.ಪ್ರ.ವಾರ್ತೆ ಶಿವಮೊಗ್ಗ ಏ. 30
ತೆಲಂಗಾಣದಲ್ಲಿ ಕಾಂಗ್ರೆಸ್ ಪರ ಚುನಾವಣೆ ಪ್ರಚಾರ ಮುಗಿಸಿ ವಾಪಸ್ಸಾಗಿರುವ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಬುಧವಾರ ಬೆಳಗ್ಗೆ ನಗರದ ಹಲವೆಡೆ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಿ ಅಧಿಕಾರಿಗಳಿಂದ ವಿವರಣೆ ಪಡೆದರು.
ಸವಳಂಗ ರಸ್ತೆಯ ಎರಡೂ ಬದಿ ಪಾದಚಾರಿ ಮಾರ್ಗದಲ್ಲಿ ಟೈಲ್ಸ್ ಅಳವಡಿಸುತ್ತಿರುವುದನ್ನು ಪರಿಶೀಲಿಸಿದ ಅವರು, ರಸ್ತೆಯ ಮೇಲೆ ನೀರು ನಿಲ್ಲದಂತೆ ಕೆಲಸ ನಿರ್ವಹಿಸಲು ಹಾಗೂ ಕಾಮಗಾರಿ ಗುಣಮಟ್ಟ ಕಾಪಾಡಲು ಸಲಹೆ ನೀಡಿದರು.
ನಂತರ ಸವಳಂಗ ರಸ್ತೆಯಿಂದ ವಿನೋಬ ನಗರದೆಡೆ ಸಾಗುವ 100 ಅಡಿ ರಸ್ತೆಯ ಕಾಮಗಾರಿ ವೀಕ್ಷಿಸಿ, ಶೀಘ್ರ ಕಾಮಗಾರಿ ಮುಕ್ತಾಯಗೊಳಿಸಲು ಸೂಚಿಸಿದರು.
ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಕಾಂಗ್ರೆಸ್ ಯುವ ಮುಖಂಡ ಕೆ. ರಂಗನಾಥ್, ಲೋಕಸಭಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಂ. ಪ್ರವೀಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್. ಕಿರಣ ಇತರರು ಇದ್ದರು.