ಡಿಸಿಸಿಬಿ ಅಧ್ಯಕ್ಷ ಮಂಜುನಾಥ ಗೌಡ ಸೆರೆ
ಶಿವಮೊಗ್ಗ: ಬಹುಕೋಟಿ ಅಡಮಾನ ಅವ್ಯವಹಾರದ ಆರೋಪದಲ್ಲಿ ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಗುರುವಾರ ಸಂಜೆ ವಿಚಾರಣೆಗೆ ಕರೆಸಿದ್ದ ಜಿಲ್ಲಾ ಅಪರಾಧ ಪತ್ತೆದಳ ಪೊಲೀಸರು ರಾತ್ರಿ 11.30ರ ನಂತರ ಮಂಜುನಾಥ ಗೌಡರನ್ನು ವಶಕ್ಕೆ ಪಡೆದುಕೊಂಡರು. ಶುಕ್ರವಾರ ಮಧ್ಯಾಹ್ನದವರೆಗೂ ವಿಚಾರಣೆ ನಡೆಸಿದ ತನಿಖಾ ತಂಡ, ನಂತರ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯ ತಪಾಸಣೆಗೊಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿತು. ವಿಚಾರಣೆ ನಡೆಸಿದ 2ನೇ ಜೆಎಂಎಫ್ಸಿ ನ್ಯಾಯಾಧೀಶ ವಿಜಯಕುಮಾರ್ ರೈ ಮಂಜುನಾಥ ಗೌಡರನ್ನು 3 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.