ಹೊಸನಗರ: ಸಾರ್ವಜನಿಕ ಆಸ್ಪತ್ರೆಯ ನೌಕರರ ಮೇಲೆ ಹಲ್ಲೆ ಘಟನೆ ಖಂಡಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ನೌಕರರ ಒಕ್ಕೂಟದ ತಾಲೂಕು ಘಟಕದ ಗೌರವ ಅಧ್ಯಕ್ಷ ಡಾ. ಲಿಂಗರಾಜ್ ಹಾಗೂ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಸಾಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯದಲ್ಲಿ ಇದ್ದ ನೌಕರರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿದರು.
ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಿಬೇಕು. ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಮಾಡುವವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಶಾಂತರಾಜ್, ವೈದ್ಯರಾದ ಡಾ. ಗೀತಾ, ಡಾ. ರಾಜೇಶ್ವರಿ, ಡಾ. ಪತಂಜಲಿ, ರಾಜ್ಯ ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ತಾಲೂಕು ಘಟಕದ ಅಧ್ಯಕ್ಷ ಅಶ್ವಿನ್ ಕುಮಾರ್ ಹಾಗೂ ನೌಕರರು ಹಾಜರಿದ್ದರು.