ಶಿವಮೊಗ್ಗ

ಜಿಲ್ಲೆಯಲ್ಲಿ 100 ಕೋಟಿ ನಷ್ಟ ಶೀಘ್ರವೇ ಪರಿಹಾರ: ರತ್ನಾಕರ್

ಶಿವಮೊಗ್ಗ: ಜಿಲ್ಲಾದ್ಯಂತ ಭಾರಿ ಮಳೆಯಿಂದಾಗಿ ಬೆಳೆಹಾನಿ ಹೊರತುಪಡಿಸಿ ಸುಮಾರು 100 ಕೋಟಿಯಷ್ಟು ನಷ್ಟ ಸಂಭವಿಸಿದೆ ಎಂದು  ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸದನ ಮುಗಿದ ನಂತರ ಜಿಲ್ಲೆಯ ನೆರೆಪೀಡಿತ ತೀರ್ಥಹಳ್ಳಿ, ಸಾಗರ, ಹೊಸನಗರ ಭಾಗಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಲ್ಲದೇ, ಅಧಿಕಾರಿಗಳ ಸಭೆ ನಡೆಸಿದ್ದೇನೆ. ಆದರೂ ಪ್ರತಿಪಕ್ಷಗಳು ವಿನಾಕಾರಣ ಆರೋಪ ಸರಿಯಲ್ಲ ಎಂದರು.
ಕಳೆದ ಒಂದು ವಾರದಿಂದ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಸೊರಬ ಸಹ ತಾಲೂಕಿನಲ್ಲೂ ಪ್ರವಾಹ ಉಂಟಾಗಿದ್ದು ಜಿಲ್ಲಾದ್ಯಂತ ಸುಮಾರು ರು. 50 ರಿಂದ ರು. 100 ಕೋಟಿ ಮೌಲ್ಯದ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದೆ. ಸಾಗರ ತಾಲೂಕು ಒಂದರಲ್ಲೇ ನಾಲ್ಕು ಸಾವಿರ ಎಕರೆ ಕೃಷಿ ಭೂಮಿಗೆ ನೀರು ನುಗ್ಗಿ ಬೆಳೆ ನಷ್ಟ ಸಂಭವಿಸಿದೆ. ಗದ್ದೆಗಳು ಜಲಾವೃತವಾಗಿವೆ. ಹೊಸನಗರ ತಾಲೂಕಿನ ಬಿದರಳ್ಳಿ, ಕಲ್ಲೂರು ಭಾಗಗಳಲ್ಲಿ ಸೇತುವೆ- ರಸ್ತೆ ಹಾನಿಯಾಗಿವೆ. ತೀರ್ಥಹಳ್ಳಿಯ ಬಹುತೇಕ ಕಡೆಗಳಲ್ಲಿ ಇದೇ ರೀತಿಯ ಅವಘಡಗಳು ಸಂಭವಿಸಿವೆ. ಬೆಳೆಹಾನಿಗೆ ರೈತರು ಯಾವುದೇ ಆತಂಕ ಪಡಬೇಕಿಲ್ಲ. ಆದಷ್ಟು ಶೀಘ್ರ ಪರಿಹಾರ ಬದಗಿಸಲಾಗುವುದು. ವಾಸ್ತವ ಹಾನಿ ಕುರಿತಂತೆ ಸರಿಯಾದ ಮಾಹಿತಿ ಸಂಗ್ರಹಿಸಿ ಪರಿಹಾರ ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ಕಿಮ್ಮನೆ ತಿಳಿಸಿದರು. ಸದ್ಯದ ಮಾಹಿತಿ ಪ್ರಕಾರ ಜಿಲ್ಲಾಡಳಿತ ಅಂದಾಜಿಸಿರುವಂತೆ ರು. 25-30 ಕೋಟಿ ನಷ್ಟ ಸಂಭವಿಸಿದೆ.  ಹೆಚ್ಚಿನ ನೆರವಿಗೆ ಸಿಎಂಗೆ  ಕೋರಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್, ಜಿ.ಪಂ.ಅಧ್ಯಕ್ಷ ಕಲಗೋಡು ರತ್ನಾಕರ್, ರಮೇಶ್ ಹೆಗಡೆ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!