ಪತಿ, ಪತ್ನಿ ಕೇಸು ಸದ್ಯವೇ ಇತ್ಯರ್ಥ...
ಶಿಕ್ಷಣ ಇಲಾಖೆಯಲ್ಲಿ ಪತಿ- ಪತ್ನಿ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದು, ಈ ಸಮಸ್ಯೆ ಇತ್ಯರ್ಥಕ್ಕೆ ಸರ್ಕಾರ ಸದ್ಯವೇ ಕ್ರಮ ಕೈಗೊಳ್ಳುವುದು ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಭರವಸೆ ನೀಡಿದರು.
ಈ ಬಗ್ಗೆ ಸುಗ್ರೀವಾಜ್ಞೆ ಅಥವಾ ಕಾನೂನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಬೇರೆ ಬೇರೆ ಕಡೆ ಕೆಲಸ ಮಾಡುತ್ತಿರುವ ಪತಿ, ಪತ್ನಿಯನ್ನು ಒಂದೇ ಜಿಲ್ಲೆಗೆ, ಹತ್ತಿರದ ತಾಲೂಕಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುವುದು. ಲೋಕಸಭೆ ಚುನಾವಣೆಗೆ ಮುಂಚೆಯೇ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ ಎಂದರು.
ಒಂದೇ ತಾಲೂಕಿಗೆ ವರ್ಗಾಯಿಸಲು ಸಾಧ್ಯವಿಲ್ಲ. ಹೀಗೆ ಮಾಡಿದರೆ ರಾಜ್ಯದ 2 ಸಾವಿರ ಶಾಲೆಗಳನ್ನು ಮುಚ್ಚಬೇಕಾಗುತ್ತದೆ ಎಂದರು.