ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪಡಿತರ ಚೀಟಿ ವಿಳಂಬ: ಜೆಡಿಎಸ್ ಆರೋಪ

Rashmi Kasaragodu
Updated On : 12 Feb 2014, 1:51 am


ಕ.ಪ್ರ.ವಾರ್ತೆ, ಶಿವಮೊಗ್ಗ, ಫೆ.11
ಪಡಿತರ ಚೀಟಿ ವಿತರಿಸುವಲ್ಲಿ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಾತ್ಯತೀತ ಜನತಾದಳ ಯುವಘಟಕ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಪಡಿತರ ಕಾರ್ಡುಗಳ ವಿತರಣೆ ವಿಳಂಬ ಆಗುತ್ತಿರುವುದರಿಂದ ಜನರು ತತ್ತರಿಸುತ್ತಿದ್ದಾರೆ. ಬಯೋವುಟ್ರಿಕ್ ಕೇಂದ್ರಗಳಲ್ಲಿ ನವೀಕರಣ ಮತ್ತು ಹೊಸ ಪಡಿತರ ಕಾರ್ಡುಗಳನ್ನು ಮಾಡಿಸಿ 3 ತಿಂಗಳಾದರೂ ವಿತರಣೆ ಆಗುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ದೂರಿದರು.
ಇಲಾಖೆ ಅಧಿಕಾರಿಗಳು ಮಧ್ಯವರ್ತಿಗಳ ಮೂಲಕ ಲಾಭ ಪಡೆದು ಕಾರ್ಡುಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಸರ್ಕಾರ ಅನ್ನಭಾಗ್ಯ ಯೋಜನೆ ಜನಸಾಮಾನ್ಯರಿಗೆ ತಲುಪುತ್ತಿಲ್ಲ.
 ಆದ್ದರಿಂದ ಜಿಲ್ಲಾಡಳಿತವು ಕೂಡಲೇ ಕ್ರಮ ಕೈಗೊಂಡು ಶೀಘ್ರವಾಗಿ ಫಲಾನುಭವಿಗಳಿಗೆ ಕಾರ್ಡುಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು.
ವಿಳಂಬಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.
ಈ ಸಂದರ್ಭ ಮಹಾನಗರ ಪಾಲಿಕೆ ಉಪ ಮೇಯರ್ ರೇಖಾ ಚಂದ್ರಶೇಖರ್, ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್, ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಜಿ.ಡಿ. ಮಂಜುನಾಥ್, ಪಾಲಿಕೆ ಸದಸ್ಯರಾದ ಎಚ್. ಪಾಲಾಕ್ಷಿ, ನಾಗರಾಜ ಕಂಕಾರಿ, ಶೇಖರ್ ಬಾಬು, ಮುಖಂಡರಾದ ತ್ಯಾಗರಾಜ್, ಶ್ರೀನಿವಾಸ್ ಗುಡಗುಡಿ ಸೇರಿದಂತೆ ಹಲವರು ಇದ್ದರು.


ದಾಂಧಲೆಗೆ ಜಿಲ್ಲಾಧಿಕಾರಿ ಅಸಮಾಧಾನ

ಮನವಿ ಸಲ್ಲಿಸಿದ ಸಂದರ್ಭ ಜಿಲ್ಲಾಧಿಕಾರಿ ವಿಫುಲ್ ಬನ್ಸಲ್ ಅವರು ನಗರದ ಗೋಪಾಲಗೌಡ ಬಡಾವಣೆಯ ಆಹಾರ ಇಲಾಖೆ ಕಚೇರಿಯಲ್ಲಿ ದಾಂಧಲೆ ನಡೆದ ಘಟನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು. ಘಟನೆಯ ಸಂಪೂರ್ಣ ವೀಡಿಯೋ ಚಿತ್ರಣ ತಮ್ಮ ಬಳಿ ಇದೆ ಎಂದರು.
ಆಗ ಜೆಡಿಎಸ್ ಕಾರ್ಯಕರ್ತರು, ಈ ಘಟನೆಗೂ ತಮಗೂ ಸಂಬಂಧವಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ತಮ್ಮ ಅಭ್ಯಂತರವಿಲ್ಲ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement