ಬಾಕಿ ಹಣ ಪಾವತಿಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ
ಕ.ಪ್ರ.ವಾರ್ತೆ, ಭದ್ರಾವತಿ, ಫೆ.11
ಭದ್ರಾವತಿಯ ಎಂಪಿಎಂ ಸಕ್ಕರೆ ಕಾರ್ಖಾನೆಗೆ ಬೆಳೆಗಾರರು ಸರಬರಾಜು ಮಾಡಿದ ಕಬ್ಬಿಗೆ ನ್ಯಾಯಯುತ ಬೆಲೆ ನೀವುದುದು, ಎಂಪಿಎಂ ಕಾರ್ಖಾನೆ ಕಬ್ಬು ಬೆಳೆಗಾರರಿಗೆ ಬಾಕಿ ನಿಲ್ಲಿಸಿಕೊಂಡಿರುವ ಹಣ ಪಾವತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಭದ್ರಾವತಿ ಘಟಕ ಅಂಬೇಡ್ಕರ್ ವೃತ್ತದಲ್ಲಿ ಕಬ್ಬು ಬೆಳೆಗಾರರ ಮಾನವ ಸರಪಳಿ ರಚಿಸಿ ರಸ್ತೆತಡೆ ಚಳವಳಿ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಂಘದ ಮುಖಂಡ ದೇವಕುಮಾರ್ ಎಂಪಿಎಂ ಕಾರ್ಖಾನೆ 2013-14ನೇ ಸಾಲಿಗೆ ಸರ್ಕಾರ ನಿಗದಿ ಪಡಿಸಿರುವಂತೆ ಪ್ರತಿ ಟನ್ ಕಬ್ಬಿಗೆ ರು. 2,500ನ್ನು ಕಬ್ಬು ಬೆಳೆಗಾರರಿಗೆ ಇನ್ನೂ ಪಾವತಿಸಿಲ್ಲವೆಂದು ಆರೋಪಿಸಿದರು.
ಪ್ರತಿಭಟನೆ ನೇತೃತ್ವವನ್ನು ಕಬ್ಬು ಬೆಳೆಗಾರರ ಸಂಘದ ಭದ್ರಾವತಿ ಘಟಕದ ಅಧ್ಯಕ್ಷ ಕೆ. ಈರಣ್ಣ, ಪ್ರಧಾನ ಕಾರ್ಯದರ್ಶಿ ಕೃಷ್ಣೇಗೌಡ, ಜಿಲ್ಲಾ ಸಂಚಾಲಕ ಎನ್.ಎಚ್. ದೇವಕುಮಾರ, ಉಪಾಧ್ಯಕ್ಷ ರಮೇಶ್, ಕಾರ್ಯದರ್ಶಿ ಶಿವಾಜಿರಾವ್, ಸಂಘಟನಾ ಕಾರ್ಯದರ್ಶಿ ಎಸ್.ಬಿ. ನಾಗರಾಜ ಮೊದಲಾದರು ವಹಿಸಿದ್ದರು.