ಶರಾವತಿ ಯೋಜನೆ ಜೂನ್‌ಗೆ ಪೂರ್ಣ
ಸಾಗರ: ನಗರದ ಜನರಿಗೆ ಕುಡಿಯುವ ನೀರನ್ನು ಪೂರೈಸುವ ನಿಟ್ಟಿನಲ್ಲಿ ಶರಾವತಿ ಹಿನ್ನೀರಿನಿಂದ ನಗರಕ್ಕೆ ನೀರು ತರುವ ಯೋಜನೆ ಕಾಮಗಾರಿ ಜೂನ್ ಅಂತ್ಯದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ಇದರಿಂದಾಗಿ ನಗರ ವ್ಯಾಪ್ತಿ ಹಾಗೂ ಹಿನ್ನೀರು ಹಾದು ಬರುವ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರಕಲಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಇಲ್ಲಿನ ನಗರಸಭೆ ವ್ಯಾಪ್ತಿಯ ಜಲಮಂಡಳಿಯಲ್ಲಿ ನಗರಕ್ಕೆ ನೀರು ಪೂರೈಸುವ ಶುದ್ದೀಕರಣ ಘಟಕದಲ್ಲಿ ಪುನರ್ ನಿರ್ಮಾಣಗೊಂಡಿರುವ ನೂತನ ಘಟಕಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು, ಜನರಿಗೆ ಶುದ್ದವಾದ ಕುಡಿಯುವ ನೀರು ಪೂರೈಸುವ ಹಿನ್ನೆಲೆಯಲ್ಲಿ ಸರ್ಕಾರ ಎಷ್ಟು ಬೇಕಾದರೂ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಎಂದರು. ಪೌರಾಯುಕ್ತ ಚಂದ್ರಶೇಖರ್ ಮಾತನಾಡಿದರು.