ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಇಂದಿನಿಂದ ತಾಲೂಕು ಮಟ್ಟದ ಕೃಷಿ ಉತ್ಸವ

Lingaraj Badiger
Updated On : 22 Feb 2014, 10:58 am

ಶಿರಾಳಕೊಪ್ಪ: ತಾಲೂಕು ಮಟ್ಟದ ಕೃಷಿ ಉತ್ಸವ 2014ರ ಫೆ. 22, 23ರಂದು ಶಿರಾಳಕೊಪ್ಪ  ಪಟ್ಟಣದ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಮ್ಮೇಳನದ ಸಿದ್ಧತೆ ಭರದಿಂದ ನಡೆದಿದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಉತ್ಸವ ವ್ಯವಸ್ಥಾಪನ ಸಮಿತಿ, ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದೆ. ನ್ನೆಲೆಯಲ್ಲಿ ಕಾರ್ಯಕರ್ತರು, ಕಾರ್ಯಕ್ರಮ ಯಶಸ್ಸಿಗೆ ಸಮರೋಪಾದಿಯಲ್ಲಿ ಕಾರ್ಯನಡೆಸಿದ್ದಾರೆ.
ಸಂಸದರ ಭೇಟಿ: ಸಂಸದ ಬಿ.ವೈ. ರಾಘವೇಂದ್ರ ಶಿರಾಳಕೊಪ್ಪದಲ್ಲಿ ನಡೆಯುತ್ತಿರುವ ಕೃಷಿ ಉತ್ಸವದ ಸಿದ್ಧತಾ  ಕಾರ್ಯ ಪರಿಶೀಲಿಸಿದರು.
ಉತ್ಸವ ಸಮಿತಿ ಅಧ್ಯಕ್ಷ ಜಿಪಂ ಸ್ಥಾಯಿಸಮಿತಿ ಅಧ್ಯಕ್ಷ ರುದ್ರಪ್ಪ ದಾನೇರ್ ಮತ್ತು ತಾಲೂಕು ಯೋಜನಾಧಿಕಾರಿ ಸುರೇಶ್ ಪತ್ರಿಕೆಗಳಿಗೆ ಮಾಹಿತಿ ನೀಡಿ, ವೀರೇಂದ್ರ ಹೆಗ್ಗಡೆ ಅವರು ರೈತರು ಮತ್ತು ಗ್ರಾಮಾಂತರ ಪ್ರದೇಶದ ಜನತೆ ಸರ್ವಾಂಗೀಣಅಭಿವ್ರದ್ದಿ ಹೊಂದಬೇಕು ಎನ್ನು ಹಿನ್ನೆಲೆಯಲ್ಲಿ ರೈತರಿಗೆ ಮಾಹಿತಿ ಕೊಡುವ ಹಿನ್ನೆಲೆಯಲ್ಲಿ ಈ ಸಮ್ಮೇಳನ ನಡೆಯುತ್ತಿರುವದಾಗಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರ , ಆಯನೂರು ಮಂಜುನಾಥ, ವಿಶ್ವನಾಥ ಶೆಟ್ಟಿ, ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ ಹಾಗೂ ಚುನಾಯಿತ ಪ್ರತಿನಿಧಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement