ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ತಿಂಗಳ ಅತಿಥಿಯಾಗಿ ವಿಶ್ವೇಶ್ವರ ಭಟ್

Lingaraj Badiger
Updated On : 22 Feb 2014, 10:59 am

ಶಿವಮೊಗ್ಗ: ಇಲ್ಲಿನ ಕರ್ನಾಟಕ ಸಂಘದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಈ ಬಾರಿ 'ಕನ್ನಡಪ್ರಭ' ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಪಾಲ್ಗೊಳ್ಳುತ್ತಿದ್ದಾರೆ. ಫೆ. 22ರಂದು ಸಂಜೆ 5.30ರಿಂದ ಕಾರ್ಯಕ್ರಮ ನಡೆಯಲಿದ್ದು, ಪತ್ರಿಕೋದ್ಯಮ ವಿಷಯವಾಗಿ ವಿಶ್ವೇಶ್ವರ ಭಟ್ ಮಾತನಾಡಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷೆ ವಿಜಯಾ ಶ್ರೀಧರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾಹಿತಿ ಹಕ್ಕು ಕಾರ್ಯಾಗಾರ
ಶಿವಮೊಗ್ಗ: ಇಲ್ಲಿನ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಫೆ. 22ರಂದು ಬೆಳಗ್ಗೆ 10 ಗಂಟೆಗೆ ಮಾಹಿತಿ ಹಕ್ಕು ಕಾಯಿದೆ ಕಾರ್ಯಾಗಾರ ನಡೆಯಲಿದೆ. ಕಾರ್ಯಕ್ರಮವನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಕುಲಸಚಿವ ಪ್ರೊ. ಗಣೇಶಮೂರ್ತಿ ಉದ್ಘಾಟಿಸುವರು..
ವಿದ್ಯುತ್ ವ್ಯತ್ಯಯ
ಶಿವಮೊಗ್ಗ: ಮೆಸ್ಕಾಂ ಘಟಕ- 6 ಶಾಖೆಯ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಕೈಗೆತ್ತಿಕೊಳ್ಳುವ ಕಾರಣ ನಗರದ ವಿವಿಧ ಕಡೆ ಫೆ. 22ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಎನ್.ಟಿ. ರಸ್ತೆ, ಮಂಡ್ಲಿ, ಬೈಪಾಸ್ ರಸ್ತೆ, ಬಿ.ಎಚ್. ರಸ್ತೆ, ನೆಹರೂ ರಸ್ತೆ ಎಡಭಾಗ, ಗಾರ್ಡನ್ ಏರಿಯಾ ಪ್ರದೇಶಗಳಲ್ಲಿ ಬೆಳಗ್ಗೆ 9.30ರಿಂದ ಸಂಜೆ 6ರವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಘಟಕ- 5, ನಗರ ಉಪ ವಿಭಾಗ- 2ರ ಸಹಾಯಕ ಎಂಜಿನಿಯರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement