ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ ಮುಖ್ಯ; ಸೋಮಶೇಖರಯ್ಯ

Vishwanath S
Updated On : 24 Feb 2014, 11:30 am

ತರೀಕೆರೆ: ವಿದ್ಯಾರ್ಥಿಗಳನ್ನು ಸತ್ಪ್ರಜೆಗಳನ್ನಾಗಿ ಬೆಳೆಸುವಂತೆ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಆರ್. ಸೋಮಶೇಖರಯ್ಯ ತಿಳಿಸಿದ್ದಾರೆ.
ಸಂಸ್ಥೆ ವತಿಯಿಂದ ಪಟ್ಟಣದ ಬಯಲು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಚಿಣ್ಣರ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ದೊರೆಯಬೇಕು, ಶಿಕ್ಷಕರ ಪಾತ್ರ ಬಹಳ ದೊಡ್ಡದು. ವಿದ್ಯಾದಾನ ಅತ್ಯಂತ ಶ್ರೇಷ್ಠವಾದುದು, ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆಯಬೇಕು ಎಂದು ಹೇಳಿದರು.
ಚೌಕಟ್ಟು ಬೇಡ: ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ರಾಜು ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಕ್ಕಳನ್ನು ಹಾಗೆ ಮಾಡಿ, ಹೀಗೆ ಮಾಡಿ ಎಂದು ವಿಪರೀತ ಚೌಕಟ್ಟು ಹಾಕುವುದು ಬೇಡ. ಮಕ್ಕಳ ಪ್ರತಿಭೆ ಅದ್ಭುತವಾದದ್ದು, ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಬೇಕು, ಸಂಸ್ಥೆ ಉತ್ತಮ ಪ್ರಗತಿ ಸಾಧಿಸುತ್ತಿರುವುದು ಸಂತೋಷ ತಂದಿದೆ ಎಂದು ಅವರು ತಿಳಿಸಿದರು.
ಪುರಸಭೆ ಸದಸ್ಯ ಈರಣ್ಣ ಮಾತನಾಡಿ, ಪುರಸಭೆ ವತಿಯಿಂದ ಸಂಸ್ಥೆಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕೊಡಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಹಿರಿಯ ಸಮಾಜ ಸೇವಕಿ ಶ್ಯಾಮಲ ಮಂಜುನಾಥ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಕಸಾಪ ತಾ. ಅಧ್ಯಕ್ಷ ಜಿ. ಸುಬ್ರಹ್ಮಣ್ಯ, ಹಿರಿಯ ಸಮಾಜ ಸೇವಕಿ ಶ್ಯಾಮಲ ಮಂಜುನಾಥ್, ಸಂಸ್ಥೆ ಅಡಳಿತಾಧಿಕಾರಿ ಟಿ.ಆರ್. ರುದ್ರಯ್ಯ, ಟಿ.ಎಸ್. ಪೂರ್ಣಿಮ ಮಾತನಾಡಿದರು.
ಪುರಸಭಾ ಸದಸ್ಯರಾದ ಎಂ. ನಾಗರಾಜ್, ಟಿ.ಎಲ್. ಮಾಲಾರಾಜು, ಎಚ್. ಲಕ್ಷ್ಮಿವಿನಯ್‌ಕುಮಾರ್, ಕನಕಶ್ರೀ ಮಹಿಳಾ ಸಮಾಜದ ಅಧ್ಯಕ್ಷೆ ಲೀಲಾ ಸೋಮಶೇಖರಯ್ಯ, ಸಂಸ್ಥೆ ಕಾರ್ಯದರ್ಶಿಗಳು ಹಾಗೂ ಸದಸ್ಯರು, ಶಿಕ್ಷಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement