ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ತಿಮ್ಮಯ್ಯ ಅಂತ್ಯಕ್ರಿಯೆ

Lingaraj Badiger
Updated On : 2 Jan 2014, 11:21 am

ಕನ್ನಡಪ್ರಭ ವಾರ್ತೆ, ಶಿವಮೊಗ್ಗ, ಜ.1
ಮಂಗಳವಾರ ನಿಧನರಾದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ ಅವರ ಅಂತ್ಯಕ್ರಿಯೆ ಬುಧವಾರ ನೆರವೇರಿತು.
ಇದಕ್ಕೂ ಮುನ್ನ ಅಂತಿಮ ನಮನ ಸಲ್ಲಿಸಲು ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಕಡೆಯಿಂದ ಶಿಕ್ಷಣ-ಸಹಕಾರಿ ಕ್ಷೇತ್ರದ ಪ್ರಮುಖರು, ಸಾರ್ವಜನಿಕರು ಇಲ್ಲಿಗಾಗಮಿಸಿದ್ದರು.
ಮಂಗಳವಾರ ರಾತ್ರಿ ಮೃತದೇಹವನ್ನು ಬೆಂಗಳೂರಿನಿಂದ ತಂದು, ಸೀಗೆಹಟ್ಟಿ ಕಲ್ಲಪ್ಪನಕೇರಿಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಅದಾಗಲೇ ಅಂತಿಮ ದರ್ಶನಕ್ಕೆ ನೂರಾರು ಸಂಖ್ಯೆಯಲ್ಲಿ ಜನರು ಕಾದಿದ್ದರು.
ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ಶಿಕ್ಷಣ ಕ್ಷೇತ್ರದ ಪ್ರಮುಖರು ಅಂತಿಮ ನಮನ ಸಲ್ಲಿಸಿದರು. ನಂತರ ಮಧ್ಯಾಹ್ನ 2 ಗಂಟೆ ವೇಳೆಗೆ ಕಳೇಬರವನ್ನು ಎನ್‌ಇಎಸ್ ಆವರಣಕ್ಕೆ ತರಲಾಯಿತು.
ಅಲ್ಲಿ ಎನ್‌ಇಎಸ್ ಆಡಳಿತ ಮಂಡಳಿಯಿಂದ ಅಂತಿಮ ನಮನ ಸಲ್ಲಿಸಲಾಯಿತು. ಎನ್‌ಇಎಸ್‌ನ ಎಲ್ಲಾ ಶಿಕ್ಷಣ ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ಅಲ್ಲಿ ಹಾಜರಿದ್ದು ಅಂತಿಮ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸಂಘ- ಸಂಸ್ಥೆಗಳ ಪರವಾಗಿ ನಮನ ಸಲ್ಲಿಸಿದರು.
ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಿಧಾನಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಶಾಸಕ ಕೆ.ಬಿ.ಪ್ರಸನ್ನಕುಮಾರ್ ಮತ್ತಿತರರು ಅಂತಿಮ ದರ್ಶನ ಪಡೆದು, ಸಂತಾಪ ಸೂಚಿಸಿದರು.
ನಂತರ ಅಂತಿಮಸಂಸ್ಕಾರ ಕಾರ್ಯಕ್ಕೆ ರುದ್ರಭೂಮಿಗೆ ಕಳೇಬರವನ್ನು ಒಯ್ಯಲಾಯಿತು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement