ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ರಾಮೇಗೌಡ, ನಾಗೇಶ್‌ಗೆ ಚಿನ್ನ

Lingaraj Badiger
Updated On : 2 Jan 2014, 11:10 am

ಭದ್ರಾವತಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಸಂಸ್ಥೆಯವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಡಿ.29ಮತ್ತು 30ರಂದು ನಡೆಸಿದ 33ನೇ ಹಿರಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯ ನಿವೃತ್ತ ಉದ್ಯೋಗಿ ರಾಮೇಗೌಡ 3000 ಮೀ. ನಡಿಗೆ, 1500 ಮೀ. ಹಾಗೂ 800 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ (ಸ್ವರ್ಣ ಪದಕ) ಗಳಿಸಿ ಪಟ್ಟಣಕ್ಕೆ ಕೀರ್ತಿ ತಂದಿದ್ದಾರೆ. ಅದೇ ರೀತಿ ಭದ್ರಾವತಿ ಅಗ್ನಿಶಾಮಕ ದಳದಲ್ಲಿ ಸೇವೆ ಸಲ್ಲಿಸುತ್ತಿರುವ ಬಿ.ಟಿ.ನಾಗೇಶ್ 100 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ (ಸ್ವರ್ಣ ಪದಕ), 200 ಮೀ. ಓಟದ ಸ್ಫರ್ಧೆಯಲ್ಲಿ ದ್ವಿತೀಯ ಸ್ಥಾನ (ರಜತ ಪದಕ), 400 ಮೀ. ಹಡರ್ಲ್ಪ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ (ಚಿನ್ನದ ಪದಕ) ಹಾಗೂ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನವನ್ನು (ಕಂಚಿನ ಪದಕ) ಪಡೆದು ಪಟ್ಟಣಕ್ಕೆ ಕೀರ್ತಿ ತಂದಿದ್ದಾರೆ.
ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಸೊರಬ: ಜನವರಿ. 4, 5ರಂದು ರಾತ್ರಿ 8 ಗಂಟೆಗೆ ತಾಲೂಕು ಚಂದ್ರಗುತ್ತಿ ಗ್ರಾಮದಲ್ಲಿ ಮುಕ್ತ ಇಂಡೋರ್ ಡಬಲ್ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿದೆ. ಇಲ್ಲಿನ ಪ್ರಿನ್ಸ್ ಕ್ಲಬ್ ನಡೆಸಲಿರುವ ಪಂದ್ಯದಲ್ಲಿ ಪ್ರಥಮ ಬಹುಮಾನವಾಗಿ 5555 ನಗದು ಹಾಗೂ ಪಾರಿತೋಷಕ, ದ್ವಿತೀಯ ಬಹುಮಾನವಾಗಿ 2222 ನಗದು, ಪಾರಿತೋಷಕ ಘೋಷಿಸಲಾಗಿದೆ.ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ- 9845783961,  994560809, 9900302170, 988021385, 7353839699, 9741633515 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement