ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಾಂಸ್ಕೃತಿಕ ಕಾರ್ಯಕ್ರಮ

Lingaraj Badiger
Updated On : 2 Jan 2014, 11:21 am

ಶಿವಮೊಗ್ಗ: ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕೈಗಾರಿಕೆ, ವಾಣಿಜ್ಯ ಇಲಾಖೆ, ನಬಾರ್ಡ್, ಜಿಲ್ಲಾಡಳಿತ ಮತ್ತು ಜಿಪಂ ಸಹಯೋಗದೊಂದಿಗೆ ಜ.5ರ ವರೆಗೆ ನಗರದ ಅಂಬೇಡ್ಕರ್ ಭವನದ ಆವರಣದಲ್ಲಿ ಏರ್ಪಡಿಸಲಾಗಿರುವ ಖಾದಿ ಉತ್ಸವದಲ್ಲಿ ಜಿಲ್ಲೆಯ ಹೆಸರಾಂತ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪ್ರತಿದಿನ ಸಂಜೆ 6.30 ರಿಂದ ಕನ್ನಡ -ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಜ.2ರಂದು ಲತಾಗೌಡ ಮತ್ತು ತಂಡ, ಜ.3ರಂದು ವಿ. ಮಹದೇವ ಮತ್ತು ತಂಡದವರಿಂದ ಸುಗಮ ಸಂಗೀತ, ಜ.4ರಂದು ನಾಡಿನ ಹೆಸರಾಂತ ಕೀರ್ತನ ಕಲಾವಿದ ಜಿ.ಆರ್. ಕೇಶವಮೂರ್ತಿ ಅವರಿಂದ ಕಥಾ ಕೀರ್ತನೆ, ಜ.5ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಸಾಹಿತ್ಯ ಸಂಗಮ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ರಾಘವೇಂದ್ರ ಅಡಿಗ ತಿಳಿಸಿದ್ದಾರೆ.
ಕುಡಿದು ಬಿದ್ದು ಸಾವು
ಶಿರಾಳಕೊಪ್ಪ: ಕುಡಿದ ಅಮಲಿನಲ್ಲಿ ತಿಳವಳ್ಳಿ ಮಂಜುನಾಥ (39) ಕಾಲುವೆಗೆ ಬಿದ್ದು ಮೃತಪಟ್ಟ ಘಟನೆ ತಡಗಣಿ ವೃತ್ತದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement