ಗ್ಯಾಸ್ ದರ ಏರಿಕೆ ಖಂಡಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ಶಿವಮೊಗ್ಗ ಜ. 3
ಗ್ಯಾಸ್ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶುಕ್ರವಾರ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಸಚಿವ ವೀರಪ್ಪ ಮೊಯ್ಲಿ ಅವರ ಪ್ರತಿಕೃತಿ ದಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಡಿ.ಎಸ್. ಅರುಣ, ಎನ್ಡಿಎ ಸರ್ಕಾರದ ಅವಧಿಯಲ್ಲಿ ಬೀದಿ ಬದಿಯಲ್ಲಿ ಸಿಲಿಂಡರ್ ಲಭ್ಯವಾಗುತ್ತಿತ್ತು. ಈಗ ಯುಪಿಎ ಅವಧಿಯಲ್ಲಿ 9 ಸಬ್ಸಿಡಿ ಸಿಲಿಂಡರ್ಗಳು ಮಾತ್ರ ಲಭ್ಯವಿದೆ. ಅದು ಜನ ಸಾಮಾನ್ಯರಿಗೆ ಸಾಲದಾಗಿದೆ. ಅಲ್ಲದೆ, ಹೆಚ್ಚುವರಿ ಸಿಲಿಂಡರ್ಗಳಿಗೆ 220 ಹೆಚ್ಚುವರಿಯಾಗಿ ತೆರಬೇಕಾಗಿರುವುದು ದುರಂತವೇ ಸರಿ ಎಂದರು.
ಕೇಂದ್ರ ಸರ್ಕಾರದ ನಿಲುವಿನಿಂದಾಗಿ ಮಧ್ಯಮ ವರ್ಗದ ಜನರು ಕಂಗಾಲಾಗಿದ್ದಾರೆ. ಪದೇ ಪದೇ ಸರ್ಕಾರ ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೊಸ ವರ್ಷದ ಕೊಡುಗೆಯಾಗಿ ಕೇಂದ್ರ ಸರ್ಕಾರ ಸಬ್ಸಿಡಿ ಅಡುಗೆ ಅನಿಲ ದರವನ್ನು ಮತ್ತು ಆಟೋಗ್ಯಾಸ್ ದರವನ್ನು ವಿಪರೀತ ಹೆಚ್ಚಳ ಮಾಡಿದೆ ಎಂದು ಆರೋಪಿಸಿದರು.
ಕಳೆದ ಒಂದು ತಿಂಗಳಲ್ಲಿ ಮೂರನೇ ಬಾರಿ ಎಲ್ಪಿಜಿ ಬೆಲೆ ಏರಿಕೆ ಮಾಡಲಾಗಿದೆ. ಅಲ್ಲದೆ, ಸಬ್ಸಿಡಿ ಮಿತಿಯನ್ನು ಅನುಷ್ಠಾನಗೊಳಿಸಿ ಜನರು ತೊಂದರೆ ಅನುಭವಿಸುವಂತೆ ಮಾಡಲಾಗಿದೆ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಭವಾನಿರಾವ್ ಮೋರೆ, ಸಾಯಿ ವರಪ್ರಸಾದ್, ಚಂದ್ರಶೇಖರ್, ಹಿರಣ್ಣಯ್ಯ, ಹೃಷಿಕೇಶ್, ದಿನೇಶ್, ವಿಶ್ವನಾಥ್ ಮತ್ತಿತರರು ಇದ್ದರು.