ತುಂಗಾ ನದಿಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು
ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಕಾಲು ಜಾರಿಬಿದ್ದು ಬೆಂಗಳೂರು ಟಿ.ದಾಸರಹಳ್ಳಿಯ ಶಾಬಾಜ್ (23) ಎಂಬವರು ಮೃತಪಟ್ಟಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆಯುತ್ತಿರುವ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಬಂದಿದ್ದರು. ಶುಕ್ರವಾರ ಬೆಳಗ್ಗೆ ಸ್ನಾನಕ್ಕೆಂದು ನದಿಗೆ ತೆರಳಿದ ಸಂದರ್ಭ ಈ ಅವಘಡ ಸಂಭವಿಸಿದೆ. ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಷಯ ತಿಳಿದು ಬೆಂಗಳೂರಿನಿಂದ ಶಾಬಾಜ್ ಪೋಷಕರು ತೀರ್ಥಹಳ್ಳಿಗೆ ಆಗಮಿಸಿದ್ದಾರೆ.