ಯುವ ಕಾಂಗ್ರೆಸ್ ಸಂಭ್ರಮ
ಹೊಸನಗರ: ಡಿ.ಕೆ. ಶಿವಕುಮಾರ್ ಹಾಗೂ ರೋಷನ್ ಬೇಗ್ ಅವರಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ಪಟ್ಟಣದಲ್ಲಿ ಯುವಕಾಂಗ್ರೆಸ್ ಅಧ್ಯಕ್ಷ ಹಾಲಗದ್ದೆ ಉಮೇಶ್ ನೇತೃತ್ವದಲ್ಲಿ ಕಾರ್ಯಕರ್ತರು ಸಂಭ್ರಮಾಚರಿಸಿದರು. ಸಂಪುಟ ವಿಸ್ತರಣೆ ಕಾಂಗ್ರೆಸ್ಗೆ ಮತ್ತು ಸಿಎಂ ಸಿದ್ದರಾಮಯ್ಯಗೆ ಇನ್ನಷ್ಟು ಬಲ ಬರಲಿದೆ. ಅಲ್ಲದೆ ಯುವ ಕಾಂಗ್ರೆಸ್ ನಾಯಕರಾಗಿರುವ ಡಿಕೆಶಿ ಪ್ರಮಾಣ ಮಾಡಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸನತ್ತ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರಲಿದ್ದಾರೆ.