ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ನಾಳೆ ಬಿಜೆಪಿ ಪ್ರತಿಭಟನೆ

Rashmi Kasaragodu
Updated On : 5 Jan 2014, 12:38 pm

ಶಿವಮೊಗ್ಗ: ಗಣಿಗಾರಿಕೆ, ಭೂ ಅಕ್ರಮಗಳಂತಹ ಆಪಾದನೆ ಹೊತ್ತಿರುವ ಡಿ.ಕೆ. ಶಿವಕುಮಾರ್ ಮತ್ತು ವಕ್ಪ್ ಆಸ್ತಿ ಹಾಗೂ ಅನ್ಯ ಅಕ್ರಮಗಳನ್ನೆಸಗಿ ಆಪಾದನೆಯನ್ನು ಎದುರಿಸುತ್ತಿರುವಂತಹ ರೋಷನ್ ಬೇಗ್ ಅವರಿಗೆ ಸಚಿವ ಸ್ಥಾನವನ್ನು ನೀಡಿ ಸರ್ಕಾರ ತನ್ನ ಮೊಂಡುತನವನ್ನು ಪ್ರದರ್ಶಿಸುತ್ತಿದ್ದು, ಸರ್ಕಾರದ ಕ್ರಮ ಖಂಡಿಸಿ ಜನವರಿ 6ರಂದು ಹೋರಾಟ ಹಮ್ಮಿಕೊಂಡಿರುವುದಾಗಿ ಬಿಜೆಪಿ ತಿಳಿಸಿದೆ. ಸೋಮವಾರ ಬೆಳಿಗ್ಗೆ 10.30ಕ್ಕೆ ನಗರದ ಬಸ್ ನಿಲ್ದಾಣದ ಬಳಿ ಬಿಜೆಪಿ ಸದಸ್ಯರು, ಮುಖಂಡರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಎಸ್.ದತ್ತಾತ್ರಿ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಜಿಲ್ಲಾಧ್ಯಕ್ಷ, ಸಂಸದ ಆಯನೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಆರ್.ಕೆ. ಸಿದ್ದರಾಮಣ್ಣ, ರಾಜ್ಯ ರೈತಮೋರ್ಚಾ ಅಧ್ಯಕ್ಷ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಮುಖಂಡರಾದ ಗಿರೀಶ್ ಪಟೇಲ್ ಹಾಗೂ ಇನ್ನಿತರ ಚುನಾಯಿತ ಪ್ರತಿನಿಧಿಗಳು, ಮುಖಂಡರುಗಳು, ಪ್ರಮುಖ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು, ಪಕ್ಷದ ಹಿತೈಶಿಗಳು ಹೋರಾಟ ಬೆಂಬಲಿಸುವಂತೆ ಅವರು ಕೋರಿದ್ದಾರೆ.

ಏಡ್ಸ್ ಜಾಗೃತಿ ಜಾಥಾ...


ಬೆಂಗಳೂರಿನ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ವತಿಯಿಂದ ತರೀಕೆರೆ ಪಟ್ಟಣದ ಬಾಲಕರ ಸರ್ಕಾರಿ ಪಪೂ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶ್ವ ಏಡ್ಸ್ ದಿನಾಚರಣೆ ಪ್ರಯಕ್ತ ಏಡ್ಸ್ ಜನ ಜಾಗೃತಿ ಜಾಥಾ ನಡೆಸಲಾಯಿತು. ಪ್ರಾಚಾರ್ಯ ಬಿ.ಡಿ.ಬಸವರಾಜಪ್ಪ, ಉಪನ್ಯಾಸಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement