ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಶಾಲೆ ಸುವರ್ಣ ಮಹೋತ್ಸವ ಶ್ಲಾಘನೀಯ

Rashmi Kasaragodu
Updated On : 5 Jan 2014, 12:39 pm

ಸಾಗರ:  ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಜೊತೆಗೆ ಶೈಕ್ಷಣಿಕ ವಾತಾವರಣ ರೂಪಿಸುವ ಶಾಲೆಯೊಂದು ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಬಗರ್‌ಹುಕುಂ ಸಮಿತಿ ಅಧ್ಯಕ್ಷ ಕಾಗೋಡು ಅಣ್ಣಪ್ಪ ಹೇಳಿದರು. ತಾಲೂಕಿನ ಬಿದರೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುವರ್ಣ ಮಹೋತ್ಸವದಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಶಾಲೆಯೊಂದು ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಈ ಭಾಗದ ಜನರ ಶೈಕ್ಷಣಿಕ ಪ್ರೀತಿ, ಸರ್ಕಾರಿ ಶಾಲೆಗಳ ಬಗ್ಗೆ ಇರುವ ಕಾಳಜಿಗೆ ಸಾಕ್ಷಿ ಎಂದರು. ಜಿಪಂ ಸದಸ್ಯೆ ಲಲಿತಾ ನಾರಾಯಣ ಮಾತನಾಡಿದರು. ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಿ.ಎಸ್. ಸತ್ಯೇಂಧರ ಇಂದ್ರ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷ ಹರೀಶ್ ಗಂಟೆ, ಸದಸ್ಯೆ ಗಿರಿಜಮ್ಮ, ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ್ ಎಂ. ಪೈ, ಅರಲಗೋಡು ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ದಿನೇಶ್, ಸದಸ್ಯ ರಮಾನಂದ ಶರ್ಮ, ಎಚ್.ಎಂ. ಉಮೇಶ್, ದೇವಮ್ಮ ಇನ್ನಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement