ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸೊರಬದಲ್ಲಿ ಕೃಷಿ ಉತ್ಸವ-2014

Rashmi Kasaragodu
Updated On : 5 Jan 2014, 12:39 pm

ಸೊರಬ:  ಸರಿಯಾಗಿ ಮಳೆ ಬೆಳೆ ಆಗದೇ ಇದ್ದಲ್ಲಿ ಸ್ವಸಹಾಯ ಸಂಘಗಳಿಂದ ಪಡೆದುಕೊಂಡ ಸಾಲ ಮರುಪಾವತಿ ಸಾಧ್ಯವಾಗುವುದಿಲ್ಲ. ಹೀಗಾದಾಗ ರೈತ ಆತ್ಮಹತ್ಯೆಗೆ ಮುಂದಾಗುತ್ತಾನೆ. ಇದನ್ನು ತಡೆಗಟ್ಟಲು ಸರ್ಕಾರಕ್ಕೆ ಯೋಜನೆಗಳ ಮೂಲಕ ಮಾಹಿತಿ ನೀಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೆಗೆ ಪಾತ್ರವಾಗಿದೆ ಎಂದು ವಿರೋಧಪಕ್ಷದ ಸಚೇತಕ ಮಧು ಬಂಗಾರಪ್ಪ ತಿಳಿಸಿದರು. ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆದ ಕೃಷಿ ಉತ್ಸವ 2014ರ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಜನೆಯ ಅಧಿಕಾರಿ ಸುಧೀರ್ ಬಂಟ್ವಾಳ ಮಾತನಾಡಿ, ಬಡತನ ರೇಖೆಗಿಂತ ಕೆಳಗಿರುವ ರೈತರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸದಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನವನ್ನು ಸೊರಬ ಪಡೆದುಕೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.ಮುಖ್ಯ ಅತಿಥಿ ಯೋಜನಾಧಿಕಾರಿ ಚಂದ್ರಶೇಖರ ಮಾತನಾಡಿದರು. ಉದ್ಘಾಟನೆಯನ್ನು ತಾಲೂಕಿನ ರೈತ ಬಂಧುಗಳು ನೆರವೇರಿಸಿದ್ದು ಸಂದರ್ಭೋಚಿತವಾಗಿತ್ತು.  ಯೋಜನಾಧಿಕಾರಿ ಎಂ.ಸತೀಶ್ ವಾರ್ಷಿಕ ವರದಿ ವಾಚಿಸಿದರು. ಪ.ಪಂ. ಸದಸ್ಯರಾದ ಮಂಚಿ ಹನುಮಂತಪ್ಪ, ಡಿ.ಆರ್. ಶ್ರೀಧರ್, ಮಹೇಶ್ ಗೌಳಿ, ಪ್ರಶಾಂತ ಮೇಸ್ತ್ರಿ, ಎಂ.ಡಿ. ಉಮೇಶ್, ರಂಜನಿ, ತಾ.ಪಂ. ಅಧ್ಯಕ್ಷ ಎಚ್.ಎಂ. ಬಸವಲಿಂಗಪ್ಪ, ಉಪಾಧ್ಯಕ್ಷೆ ನೀಲಮ್ಮ ಸುರೇಶ್, ಸದಸ್ಯರಾದ ಜಯಶೀಲಪ್ಪ, ವೀರಭದ್ರಗೌಡ ಮೊದಲಾದವರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement