ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

23ರಂದು ಎಸ್ಮಾ ವಿರೋಧಿಸಿ ಬೆಂಗಳೂರಲ್ಲಿ ಪ್ರತಿಭಟನೆ

Lingaraj Badiger
Updated On : 8 Jan 2014, 11:58 am

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ನೂತನವಾಗಿ ಜಾರಿಗೆ ತರಲು ಮುಂದಾಗಿರುವ ಎಸ್ಮಾ ಕಾಯ್ಕೆ ವಿರೋಧಿಸಿ ಸಿಐಟಿಯು ಜ.23ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘಟನೆಯ ಕಾರ್ಯದರ್ಶಿ ಎಸ್. ಪ್ರಸನ್ನಕುಮಾರ್, ಕಾರ್ಮಿಕರಿಗೆ ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಪಿಂಚಣಿ ಜಾರಿ ಹಾಗೂ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಸಂಘಟನೆ ಬೇಡಿಕೆಗೆ ಸ್ಪಂದಿಸದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದರು.
ಬೆಲೆ ಏರಿಕೆ: ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸರ್ಕಾರ ಕಾಳಜಿ ವಹಿಸಿದ್ದರೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಬಹುದಿತ್ತು. ಆದರೆ, ಇದರ ಬಗ್ಗೆ ನಿರ್ಲಕ್ಷ್ಯ ವಹಿಸಿದೆ. ಪೆಟ್ರೋಲ್ ಹಾಗೂ ಡೀಸೆಲ್‌ಗೆ ವಿಧಿಸಿರುವ ತೆರಿಗೆಯನ್ನು ಕಡಿಮೆ ಮಾಡುತ್ತಿಲ್ಲ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ನಾರಾಯಣ್, ಕೆಎಸ್‌ಆರ್‌ಟಿಸಿ ನೌಕರರ ಫೆಡರೇಷನ್ ರಾಜ್ಯ ಉಪಾಧ್ಯಕ್ಷ ನರಸಿಂಹಯ್ಯ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement