ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

5ನೇ ದಿನಕ್ಕೆ ಅಹೋರಾತ್ರಿ ಧರಣಿ ಸತ್ಯಾಗ್ರಹ

Rashmi Kasaragodu
Updated On : 12 Jan 2014, 12:52 pm

ಸೊರಬ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆವತಿಯಿಂದ ತಾಲೂಕು ಕಚೇರಿ ಎದುರು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ.
ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿರುವ ತಾಲೂಕು ಸಂಚಾಲಕ ಬಸವರಾಜ್ ಹಶ್ವಿ ಮಾತನಾಡಿ, ಜಿಲ್ಲಾಧಿಕಾರಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಿ ನಮ್ಮ ಬೇಡಿಕೆಗಳು ಈಡೇರಿಸಬೇಕು. ಇಲ್ಲವಾದಲ್ಲಿ ಅದೇಷ್ಟೇ ದಿನವಾದರೂ ಸರಿ ಅಹೋರಾತ್ರಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಮುಂದುವರೆಯುತ್ತದೆ ಎಂದರು.
ಈಗಾಗಲೇ ಮಾಜಿ ಸಚಿವ ಹೆಚ್. ಹಾಲಪ್ಪ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಅಲ್ಲದೇ ನಮ್ಮ ಧರಣಿಗೆ ಬೆಂಬಲವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ತಾಲ್ಲೂಕು ಸಂಘಟನಾ ಸಂಚಾಲಕರಾದ ಮಂಜುನಾಥ, ಶಿವಕುಮಾರ್, ತಾಲೂಕು ಸಂಘಟನಾ ಸಂಚಾಲಕರಾದ ಡಿ. ರಮೇಶ್, ಗುಡಗಿನಕೊಪ್ಪ, ಬೆಣ್ಣಿಗೇರೆ, ದ್ವಾರಳ್ಳಿ, ಹಾಗೂ ತಾಲೂಕಿನ ಬಗರ್ಹುಕುಂ ಸಾಗವಳಿದಾರರು ಧರಣಿ ಸತ್ಯಾಗ್ರಹದಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement