ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ಭ್ರಷ್ಟರಿಗೆ ಮಣೆ ಹಾಕಿರುವ ಸಿಎಂ'

Rashmi Kasaragodu
Updated On : 12 Jan 2014, 12:48 pm

ಸೊರಬ: ಕಳಂಕಿತರನ್ನು ತಮ್ಮ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟರಿಗೆ ಮಣೆ ಹಾಕಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ತಾಲೂಕು ಅಧ್ಯಕ್ಷ ಎಲ್.ಜಿ. ಗುಡ್ಡಪ್ಪ ಬಂಕವಳ್ಳಿ ಆರೋಪಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಗಣಿ ಹಗರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದರು. ಆದರೆ, ಗಣಿ ಹಗರಣದಲ್ಲಿ ಭಾಗಿಯಾಗಿರುವ ಡಿ.ಕೆ.  ಶಿವಕುಮಾರ್ ಹಾಗೂ ಬಿಡಿಎ ಹಗರಣ ಸೇರಿದಂತೆ ಇತರೆ ಹಗರಣದಲ್ಲಿ ಭಾಗಿಯಾದ ಬಗ್ಗೆ ಆರೋಪವಿರುವ ಆರ್. ರೋಷನ್ಬೇಗ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಸರಿಯಲ್ಲ. ಭ್ರಷ್ಟರು ಹಾಗೂ ಕಳಂಕಿತರ ಬಗ್ಗೆ ಹೋರಾಟ ಮಾಡಿ, ತಮ್ಮ ಸರ್ಕಾರದಲ್ಲಿಯೇ ಕಳಂಕಿತರನ್ನು ಸೇರಿಸಿಕೊಂಡಿರುವುದನ್ನು ಗಮನಿಸಿದರೆ ಸಿದ್ದರಾಮಯ್ಯನವರ ಸರ್ಕಾರ ಕಾಂಗ್ರೆಸ್ ಹೈಕಮಾಂಡ್ನ ಕೈಯಲ್ಲಿದೆ. ಹಾಗಾಗಿ ಸಿದ್ದರಾಮಯ್ಯ ಹಲ್ಲುಕಿತ್ತ ಹಾವಾಗಿದ್ದು, ನಾಮಕಾವಸ್ಥೆ ಮುಖ್ಯಮಂತ್ರಿ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement