ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅಹವಾಲು ಸ್ವೀಕಾರ

Rashmi Kasaragodu
Updated On : 14 Jan 2014, 11:21 am

ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ಜ.16ರಂದು ಬೆಳಗ್ಗೆ 11ರಿಂದ 1 ಗಂಟೆವರೆಗೆ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಪಂಯಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಅಭ್ಯರ್ಥಿಗಳ ನೋಂದಣಿ
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಡಿಸೆಂಬರ್ನಲ್ಲಿ ಜಿಲ್ಲೆಯ 241 ಪುರುಷರ, 85 ಮಹಿಳೆಯರು ಸೇರಿದಂತೆ ಒಟ್ಟು 326 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಎಸ್ಸೆಸ್ಸೆಲ್ಸಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ 10, ಎಸ್ಸೆಸ್ಸೆಲ್ಸಿ ಹಾಗೂ ಪದವೀಧರರಲ್ಲದ 133, ಪದವೀಧರರು-32, ತಾಂತ್ರಿಕ ಪದವೀಧರರು-151 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ವಾಹನ ಹರಾಜು
ಶಿವಮೊಗ್ಗ: ಸಾರಿಗೆ ಇಲಾಖೆ ಸಾಗರದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿಗಳ ಕಚೇರಿ ಹಳೆ ಮಾದರಿಯ ಸರ್ಕಾರಿ ವಾಹನ ಕೆಎ-14ಜಿ-305 (ಟಾಟಾ ಸುಮೋ) ಜ.28ರಂದು ಮಧ್ಯಾಹ್ನ 12 ಗಂಟೆಗೆ ಸಾಗರದ ಸಾರಿಗೆ ಕಚೇರಿ ಆವರಣದಲ್ಲಿ ವಿಲೆ ಮಾಡಲಾಗುವುದು. ಬಹಿರಂಗ ಹರಾಜಿನಲ್ಲಿ ಭಾಗವಹಿಸಲಿಚ್ಛಿಸುವವರು 5ಸಾವಿರ ಠೇವಣಿ ಮುಂಗಡವಾಗಿ ಸಂದಾಯ ಮಾಡುವಂತೆ ಸಾರಿಗೆ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement