ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಇಂದು ಶಿವಲಿಂಗ ಪ್ರಶಸ್ತಿ ಪ್ರದಾನ

Rashmi Kasaragodu
Updated On : 14 Jan 2014, 11:20 am

ತೀರ್ಥಹಳ್ಳಿ: ಕೋಣಂದೂರು ಬೃಹನ್ಮಠದಲ್ಲಿ ಧನುರ್ಮಾಸದ ಶಿವಪೂಜಾನುಷ್ಠಾನ ಮುಕ್ತಾಯ ಹಾಗೂ ಶ್ರೀ ಶಿವಲಿಂಗ ಪ್ರಶಸ್ತಿ ಪ್ರದಾನ ಸಮಾರಂಭವು ಜನವರಿ 14ರಂದು ನಡೆಯಲಿದೆ.
ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ಕೆ.ಎಸ್. ಈಶ್ವರಪ್ಪ ಉದ್ಘಾಟಿಸುವರು. ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ, ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುವರು.
ಸಮಾರಂಭದಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಮುರುಗೇಶ್ ನಿರಾಣಿ, ಮಾಜಿ ಶಾಸಕ ಆರಗ ಜ್ಞಾನೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಮುಂತಾದವರು ಈ ಧರ್ಮ ಸಭೆಯಲ್ಲಿ ಉಪಸ್ಥಿತಲಿರಲಿದ್ದಾರೆ.
ವಿಶೇಷವಾಗಿ ಶ್ರೀ ಶಿವಲಿಂಗ ಶ್ರೀ ಪ್ರಶಸ್ತಿಯನ್ನು ಕೈಗಾರಿಕೋದ್ಯಮಿ, ಲೋಕಸೇವಾ ಆಯೋಗದ ಮಾಜಿ ಸದಸ್ಯ ಎಸ್. ರುದ್ರೇಗೌಡರಿಗೆ ನೀಡಲಾಗುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement