ಜಾಗೃತಿ ಜಾಥಾ
ಶಿವಮೊಗ್ಗ: ರಾಜೇಂದ್ರ ನಗರದ ವಿವಿಧ ಬಡಾವಣೆಗಳಲ್ಲಿ ಸಾರ್ವಜನಿಕರಿಗೆ ಪಲ್ಸ್ ಪೋಲಿಯೋ ಬಗ್ಗೆ ಜಾಗೃತಿ ಮೂಡಿಸಲು ಜನವರಿ 16ರಂದು ಜಾಥಾ ಹಮ್ಮಿಕೊಳ್ಳಲಾಗಿದೆ. ರೋಟರಿ ಶಿವಮೊಗ್ಗ ಪೂರ್ವ, ರೋಟರಿ ಪೂರ್ವ ವಿದ್ಯಾಸಂಸ್ಥೆ, ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ, ಇಂಟರ್ಯಾಕ್ಟ್ ಕ್ಲಬ್ ಸದಸ್ಯರು, ಶಾಲಾ ಮಕ್ಕಳು ಅಂದು ಬೆಳಿಗ್ಗೆ 11 ಗಂಟೆಯಿಂದ ಜಾಥಾ ನಡೆಸಲಿದ್ದಾರೆ. ಜಾಥವನ್ನು ಪಲ್ಸ್ ಪೋಲಿಯೋ ಸಂಯೋಜಕ ಡಿ.ಎಸ್. ಅರುಣ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಕೆ.ಎಸ್. ಪುರುಷೋತ್ತಮ್, ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ. ವಿಜಯಕುಮಾರ್, ಪಲ್ಸ್ ಪೋಲಿಯೋ ಆಂಧೋಲನದ ಅಧ್ಯಕ್ಷ ಡಾ. ರವಿಕಿರಣ್, ಕಾರ್ಯದರ್ಶಿ ಬಿ. ಪ್ರಸನ್ನಕುಮಾರ್, ಎಂ.ಎಲ್. ಪ್ರತಾಪ್, ಮ್ಯಾನೇಜಿಂಗ್ ಟ್ರಸ್ಟಿ ಕಡಿದಾಳ್ ಗೋಪಾಲ್, ಇನ್ನರ್ವೀಲ್ ಅಧ್ಯಕ್ಷರಾದ ಸುಜಯ ಪುರುಷೋತ್ತಮ್ ಪಾಲ್ಗೊಳ್ಳಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.