ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಶೀಘ್ರವೇ ಸಂಸದರ ಮೇಲಿನ ಅಮಾನತು ವಾಪಸ್

Rashmi Kasaragodu
Updated On : 15 Jan 2014, 12:21 pm

ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ  ಜ.14
ಪಕ್ಷದಿಂದ ಅಮಾನತುಗೊಳಿಸಲಾಗಿದ್ದ ಸಂಸದರ ಮೇಲಿನ ಕ್ರಮವನ್ನು ಶೀಘ್ರದಲ್ಲೇ ಪಕ್ಷ ವಾಪಸ್ ಪಡೆಯಲಿದೆ. ಈ ಸಂಬಂಧ ಪ್ರಕ್ರಿಯೆಗಳು ನಡೆದಿವೆ ಎಂದು ಬಿಜೆಪಿ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ತಿಳಿಸಿದರು.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಪಕ್ಷದ ಸಂಸದರಾದ ಬಿ.ವೈ. ರಾಘವೇಂದ್ರ ಹಾಗೂ ಹಾವೇರಿ ಸಂಸದ ಶಿವಕುಮಾರ ಉದಾಸಿ ಅವರನ್ನು ಕೆಜೆಪಿಗೆ ಬೆಂಬಲಿಸುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿತ್ತು. ಈಗಾಗಲೇ ಬಿ.ಎಸ್. ಯಡಿಯೂರಪ್ಪನವರು ಕೆಜೆಪಿಯನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದಾರೆ. ಹಾಗೆಯೇ ಇಬ್ಬರು ಸಂಸದರು ಕೂಡ ಮಾನಸಿಕವಾಗಿ ಮತ್ತು ದೈಹಿಕವಾಗಿ ಬಿಜೆಪಿಗೆ ವಾಪಸಾಗಿದ್ದಾರೆ. ತಾಂತ್ರಿಕವಾಗಷ್ಟೇ ಹೊರಗಿದ್ದಾರೆ ಎಂದರು.
ಈ ಇಬ್ಬರು ಸಂಸದರ ಮೇಲಿನ ಅಮಾನತನ್ನು ವಾಪಸ್ ಪಡೆಯಲಾಗುವುದು. ಈ ಬಗ್ಗೆ ರಾಜ್ಯ ಕಾರ್ಯಕಾರಿಣಿ ಶೀಘ್ರದಲ್ಲೇ ನಿರ್ಣಯ ಕೈಗೊಂಡು ರಾಷ್ಟ್ರೀಯ ಪ್ರಮುಖರಿಗೆ ಕಳುಹಿಸಿಕೊಡಲಿದೆ. ರಾಷ್ಟ್ರೀಯ ಪ್ರಮುಖರು ಅದನ್ನು ಘೋಷಣೆ ಮಾಡಲಿದ್ದಾರೆ, ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ಕೂಡ ತಿಳಿಸಿದ್ದಾರೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ...: ವಿಸರ್ಜಿತ ಕೆಜೆಪಿ ಮುಖಂಡರನ್ನು ಜಿಲ್ಲೆಯಲ್ಲಿ ಪಕ್ಷಕ್ಕೆ ಆಹ್ವಾನಿಸಿದ್ದು, ಮುಂದಿನ ವಾರದಲ್ಲಿ ಅಧಿಕೃತವಾಗಿ ಆಗಮಿಸುತ್ತಿದ್ದು, ಚಟುವಟಿಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಆಯನೂರು ಮಂಜುನಾಥ್ ಹೇಳಿದರು.
ಕೆಜೆಪಿಯಲ್ಲಿದ್ದ ಪ್ರಮುಖ ಮುಖಂಡರಿಗೆ ದೂರವಾಣಿ ಕರೆ ಮಾಡಿ ಮಾತನಾಡಲಾಗಿದ್ದು, ಆಹ್ವಾನ ನೀಡಲಾಗಿದೆ. ಸದ್ಯವೇ ಇನ್ನೊಂದು ಸುತ್ತಿನ ಮಾತುಕತೆ ನಡೆಸಲಾಗುತ್ತಿದೆ. ಅವರೆಲ್ಲರೂ ನಮ್ಮನ್ನು ಸದ್ಯವೇ ಬಂದು ಸೇರಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಬಿ.ಎಸ್. ಯಡಿಯೂರಪ್ಪನವರು ಬೆಂಗಳೂರಿನ ಪಕ್ಷದ ಕಚೇರಿಗೆ ಆಗಮಿಸುವ ಜೊತೆಗೆ ಈಗಾಗಲೇ ಪಕ್ಷದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಸೇರಿದಂತೆ ಪ್ರಮುಖ ಸಭೆಗಳಲ್ಲಿ ಪಾಲ್ಗೊಂಡಿದ್ದಾರೆ. ಶಿವಮೊಗ್ಗ ಕಚೇರಿಗೆ ಬರುವ ಮುನ್ನ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸುವ ಚಿಂತನೆಗಳು ನಡೆದಿವೆ. ಅದರ ಬಗೆಗೆ ಯಾವುದೇ ದಿನಾಂಕ ನಿಶ್ಚಯವಾಗಿಲ್ಲ ಎಂದರು.
ಪಕ್ಷದ ಜಿಲ್ಲಾ ಸಮಿತಿಗಳು ಪುನಾರಚನೆಯಾಗಲಿವೆಯೇ ಎಂಬ ಸುದ್ದಿಗಾರರ ಪ್ರಶ್ನೆ ಉತ್ತರಿಸಿದ ಅವರು, ಜಿಲ್ಲಾ ಸಮಿತಿಗಳು ಈಗಾಗಲೇ ರಚನೆಯಾಗಿವೆ. ಹಾಗಾಗಿ ಪುನಾರಚನೆಯಾಗುವ ಸಂಭವಗಳಿಲ್ಲ. ಮಾಜಿ ಸಿಎಂ ಯಡಿಯೂರಪ್ಪನವರು ಎಲ್ಲೆಲ್ಲಿ ಬಯಸುತ್ತಾರೋ ಅಂತಹ ಕಡೆಗಳಲ್ಲಿ ಪಕ್ಷದಿಂದ ಹೊರಹೋಗಿರುವವರಿಗೂ ಸೂಕ್ತ ಸ್ಥಾನಮಾನ ಕಲ್ಪಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement