ಹೊಲಿಗೆ ತರಬೇತಿಗೆ ಅರ್ಜಿ
ಶಿವಮೊಗ್ಗ: ಕುಮಟಾದ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯ ಸಹಯೋಗದೊಂದಿಗೆ ಜಿಲ್ಲೆಯ ಸೊರಬ ಮತ್ತು ಸಾಗರ ತಾಲೂಕಿನ ನಿರುದ್ಯೋಗಿ ಮಹಿಳೆಯರಿಗಾಗಿ ಜನವರಿ 17ರಿಂದ ಫೆಬ್ರವರಿ 6ರವರೆಗೆ 21 ದಿನಗಳ ಹೊಲಿಗೆ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ನಿರ್ದೇಶಕರು, ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಂಡ್ಆರ್ಸೆಟಿ), ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ, ಉತ್ತರ ಕನ್ನಡ ಇಲ್ಲಿಗೆ ಸಲ್ಲಿಸುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ. 08386-220530ನ್ನು ಸಂಪರ್ಕಿಸಬಹುದು.